ADVERTISEMENT

ಸಾಸಿವೆ ಇಲ್ಲದ ಮನೆ ಇಲ್ಲ, ಬಿಜೆಪಿ ಹಗರಣ ನಡೆಸದ ಇಲಾಖೆ ಇಲ್ಲ: ಕಾಂಗ್ರೆಸ್ ಲೇವಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಡಿಸೆಂಬರ್ 2022, 7:45 IST
Last Updated 22 ಡಿಸೆಂಬರ್ 2022, 7:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿಚಾರವನ್ನು ಪ್ರಸ್ತಾಪಿಸಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.

ಅಂಬೇಡ್ಕರ್ ಅಭಿವೃದ್ಧಿ ನಿಗಮದ ವಿಚಾರವಾಗಿ ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡಿರುವ ವಿಶೇಷ ವರದಿಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸಾಸಿವೆ ಇಲ್ಲದ ಮನೆ ಇಲ್ಲ, ಬಿಜೆಪಿ ಹಗರಣ ನಡೆಸದ ಇಲಾಖೆ ಇಲ್ಲ. ಭ್ರಷ್ಟಾಚಾರವು ಬಿಜೆಪಿಯ ಕಣ ಕಣದಲ್ಲೂ ಅಡಕವಾಗಿದೆ’ ಎಂದು ವಾಗ್ದಾಳಿ ನಡೆಸಿದೆ.

‘ನಾವು ಆರೋಪಿಸಿದ್ದ ಅಂಬೇಡ್ಕರ್ ನಿಗಮದ ಹಗರಣ ಇಲಾಖೆಯ ಪ್ರಾಥಮಿಕ ತನಿಖೆಯಲ್ಲೇ ಬಹಿರಂಗವಾಗಿದೆ. ದಲಿತರ ಪಾಲಿನ ಹಣ ಲೂಟಿ ಹೊಡೆಯುತ್ತಿರುವ ಬಿಜೆಪಿ ಸರ್ಕಾರ ದಲಿತರ ಏಳಿಗೆ, ಅಭಿವೃದ್ಧಿಗೆ ಮಣ್ಣು ಹಾಕುತ್ತಿದೆ’ ಎಂದು ಕಿಡಿಕಾರಿದೆ.

ADVERTISEMENT

ಸರ್ಕಾರದ ಆದೇಶ ಉಲ್ಲಂಘಿಸಿ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಐದು ಸಾವಿರ ಫಲಾನು ಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ನೇರ ಸಾಲ ಯೋಜನೆಯಡಿ ತಲಾ ₹ 50 ಸಾವಿರ ಮಂಜೂರು ಮಾಡಿ ₹ 25 ಕೋಟಿ ಅಕ್ರಮ ಎಸಗಿರುವುದೂ ಸೇರಿದಂತೆ ಭಾರಿ ಭ್ರಷ್ಟಾಚಾರ ನಡೆಸಿರುವುದು ಇಲಾಖೆಯ ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿದೆ.

ಅಕ್ರಮ ದೂರುಗಳು ಬಂದ ಕಾರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಸುರೇಶ್‌ ಕುಮಾರ್‌ ಅವರನ್ನು ಅ. 29ರಂದು ಎತ್ತಂಗಡಿ ಮಾಡಿ ಆ ಜಾಗಕ್ಕೆ ಸುರೇಶ ನಾಯಕ ಅವರನ್ನು ಸರ್ಕಾರ ವರ್ಗಾವಣೆ ಮಾಡಿತ್ತು.

ಸರ್ಕಾರದ ನಿರ್ದೇಶನದಂತೆ ಸುರೇಶ್‌ ಕುಮಾರ್‌ ಮೇಲಿನ ದೂರುಗಳ ಮೇಲೆ ಸುರೇಶ ನಾಯಕ ಅವರು ತನಿಖೆ ನಡೆಸಿ ವರದಿ ಸಲ್ಲಿಸಿದ್ದು, ಅದರ ಪ್ರತಿ ಇಲಾಖೆಯಿಂದ ‘ಪ್ರಜಾವಾಣಿ’ಗೆ ಲಭ್ಯವಾಗಿದೆ. ಆದರೆ, ತನ್ನನ್ನು ವರ್ಗಾ ವಣೆ ಮಾಡಿ ಸುರೇಶ ನಾಯಕ ಅವ ರನ್ನು ನೇಮಿಸಿದ ಕ್ರಮದ ವಿರುದ್ಧ ಕೆಎಟಿ ಯಿಂದ ತಡೆಯಾಜ್ಞೆ ತಂದು ಸುರೇಶ ಕುಮಾರ್ ಇದೇ 13ರಿಂದ ಮತ್ತೆ ನಿಗಮದ ಅಧ್ಯಕ್ಷ ಹುದ್ದೆಯಲ್ಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.