ADVERTISEMENT

ಲಾಕ್‍‍ಡೌನ್ | ಅಂಬೇಡ್ಕರ್ ಜಯಂತಿ ಸರಳ ಆಚರಣೆ: ಡಿಸಿಎಂ ಗೋವಿಂದಕಾರಜೋಳ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2020, 12:30 IST
Last Updated 12 ಏಪ್ರಿಲ್ 2020, 12:30 IST
ಡಾ.ಬಿ.ಆರ್.ಅಂಬೇಡ್ಕರ್
ಡಾ.ಬಿ.ಆರ್.ಅಂಬೇಡ್ಕರ್   

ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ರಾಷ್ಟದಾದ್ಯಂತ ಲಾಕ್‌ಡೌನ್ ಕಾರಣ ಏಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರ 129 ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಅಂದುಬೆಳಿಗ್ಗೆ 10.00 ಗಂಟೆಗೆ ವಿಧಾನಸೌಧದ ಮುಂಭಾಗದ ಪ್ರತಿಮೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಲಾರ್ಪಣೆ ಮಾಡಲಿದ್ದಾರೆ.

ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವುದನ್ನು ನಿಯಂತ್ರಣಗೊಳಿಸಲು ರಾಷ್ಟ್ರದಾದ್ಯಂತ ಲಾಕ್‌ಡೌನ್ ಜಾರಿಯಲ್ಲಿದ್ದು, 144 ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು, ಸಂಘಟನೆಗಳು, ಸಂಘಸಂಸ್ಥೆಗಳ ಪದಾಧಿಕಾರಿಗಳು, ಈ ಮಹಾನ್ ಚೇತನರ ಅಭಿಮಾನಿಗಳು, ಅನುಯಾಯಿಗಳು ಸಹಕರಿಸಿ ಏ.14ರಂದು ಡಾ. ಬಿ.ಆರ್.ಅಂಬೇಡ್ಕರ್‌ರವರ ಜನ್ಮ ದಿನಾಚರಣೆಯನ್ನು ತುಂಬಾ ಸರಳವಾಗಿ ಹೆಚ್ಚಿನ ಜನಸಂದಣಿ ಸೇರದಂತೆ ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಿಸಬೇಕು ಎಂದು ಗೋವಿಂದ ಎಂ ಕಾರಜೋಳ‌ ಮನವಿ ಮಾಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.