ADVERTISEMENT

ಸರ್ಕಾರಿ ಪತ್ರ: ‘ಅಂಬೇಡ್ಕರ್‌ ವೀದಿ’ ಬಳಕೆ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2025, 15:59 IST
Last Updated 9 ಏಪ್ರಿಲ್ 2025, 15:59 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಕರ್ನಾಟಕ ಸರ್ಕಾರ ಸಚಿವಾಲಯದ ಎಲ್ಲ ಅಧಿಕೃತ ಪತ್ರ ವ್ಯವಹಾರಗಳಲ್ಲಿ ‘ಡಾ.ಬಿ.ಆರ್‌. ಅಂಬೇಡ್ಕರ್‌ ವೀದಿ’ ಎಂದು ವಿಳಾಸ ನಮೂದಿಸುವುದನ್ನು ಕಡ್ಡಾಯಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸುತ್ತೋಲೆ ಹೊರಡಿಸಿದೆ. 

ಕರ್ನಾಟಕ ಸರ್ಕಾರದ ಸಚಿವಾಲಯವು ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿವೆ. ಈ ಕಟ್ಟಡಗಳು ಅಂಬೇಡ್ಕರ್‌ ವೀದಿಯಲ್ಲಿವೆ. ಆದರೆ, ವಿವಿಧ ಇಲಾಖೆಗಳು ನಡೆಸುವ ಪತ್ರವ್ಯವಹಾರದಲ್ಲಿ ವಿಳಾಸ ನಮೂದಿಸುತ್ತಿಲ್ಲ. ಭಾರತದ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಹೆಸರನ್ನು ಒಳಗೊಂಡ ವೀದಿಯ ಹೆಸರು ಬಳಸದೇ ಇರುವುದು ಅಪೂರ್ಣ ಹಾಗೂ ಅಸಮಂಜಸವಾಗುತ್ತದೆ ಎಂದು ವಿವರಿಸಲಾಗಿದೆ. ಸರ್ಕಾರದ ನಿರ್ದೇಶನವನ್ನು ತಕ್ಷಣದಿಂದಲೇ ಜಾರಿಗೊಳಿಸಬೇಕು ಎಂದು ಸೂಚಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.