ಉಡುಪಿ: ಕನ್ನಡ ಸಾಹಿತ್ಯ ಪರಿಷತ್‌ನ ಬೈಲಾಗಳಲ್ಲಿ ಕಾನೂನು ಬದ್ಧವಾಗಿಯೇ ಕೆಲವು ತಿದ್ದುಪಡಿಗಳನ್ನು ಮಾಡಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ಹೇಳಿದರು.
ಸುದ್ದಿಗಾರರ ಜೊತೆ ಬುಧವಾರ ಇಲ್ಲಿ ಮಾತನಾಡಿದ ಅವರು, ದೇಶದ ಸಂವಿಧಾನಕ್ಕೆ 106 ಬಾರಿ ತಿದ್ದುಪಡಿ ಮಾಡಲಾಗಿದೆ, ಹಾಗಿರುವಾಗ ಕಸಾಪದ ಬೈಲಾಕ್ಕೆ ತಿದ್ದುಪಡಿ ಮಾಡಲಿಕ್ಕೂ ಕಾನೂನಿನಲ್ಲಿ ಅವಕಾಶ ಇದೆ. ಅಲ್ಲದೆ ಕಸಾಪ ಬೈಲಾ ಇದೇ ಮೊದಲ ಬಾರಿಗೆ ತಿದ್ದುಪಡಿ ಮಾಡಲಾಗುತ್ತಿಲ್ಲ, ಈ ಹಿಂದೆಯೂ ಮಾಡಲಾಗಿದೆ ಎಂದು ಹೇಳಿದರು.
‘ಕ.ಸಾ.ಪ. ಚುನಾವಣೆಯಲ್ಲಿ ಸೋತವರು ಸೇಡು ತೀರಿಸಿಕೊಳ್ಳಲು ತಿದ್ದುಪಡಿಯನ್ನು ವಿರೋಧಿಸುತ್ತಿದ್ದಾರೆ. ನನ್ನನ್ನು ಸರ್ವಾಧಿಕಾರಿ ಎನ್ನುತ್ತಿದ್ದಾರೆ’ ಎಂದರು.
ಚುನಾವಣೆಯಲ್ಲಿ ಎರಡು ಬಾರಿ ಗೆದ್ದವರು ಹೊಸಬರಿಗೆ ಅವಕಾಶ ಕಲ್ಪಿಸುವುದು, ಮಹಿಳೆಯರಿಗೆ ಸೂಕ್ತ ಪ್ರಾತಿನಿಧ್ಯ ನೀಡುವುದು, ಸತತ 3 ಬಾರಿ ಕಾರ್ಯಕಾರಿ ಸಭೆಗಳಿಗೆ ಗೈರಾದವರ ಸದಸ್ಯತ್ವ ರದ್ದು ಮಾಡುವುದು ಸೇರಿದಂತೆ ವಿವಿಧ ಬದಲಾವಣೆಗಳನ್ನು ಮಾಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.