ADVERTISEMENT

ಅರಣ್ಯ ಹಕ್ಕು ಕಾಯ್ದೆಗೆ ಮಾರ್ಪಾಡು: ಕಾಗೇರಿ ಮನವಿ

​ಪ್ರಜಾವಾಣಿ ವಾರ್ತೆ
Published 25 ಜುಲೈ 2024, 16:04 IST
Last Updated 25 ಜುಲೈ 2024, 16:04 IST
ಭೂಪೇಂದರ್ ಯಾದವ್‌ ಅವರಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಸಲ್ಲಿಸಿದರು. 
ಭೂಪೇಂದರ್ ಯಾದವ್‌ ಅವರಿಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ ಸಲ್ಲಿಸಿದರು.     

ನವದೆಹಲಿ: ‘ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ಕಾಯ್ದೆ 2006’ ಅಡಿಯಲ್ಲಿ ಅರಣ್ಯವಾಸಿಗಳಿಗೆ ಅರಣ್ಯ ಹಕ್ಕು ನೀಡಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ಅರಣ್ಯ ಹಾಗೂ ಪರಿಸರ ಸಚಿವ ಭೂಪೇಂದರ್ ಯಾದವ್‌ ಅವರಿಗೆ ಗುರುವಾರ ಮನವಿ ಸಲ್ಲಿಸಿದರು. 

‘ಕೇಂದ್ರ ಸರ್ಕಾರವು 2006 ರಲ್ಲಿ ಈ ಕಾಯ್ದೆ ಜಾರಿಗೊಳಿಸಿತು. ಇದರ ಅನ್ವಯ 2005ರ ಡಿಸೆಂಬರ್‌ 13 ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯದಲ್ಲಿ ವಾಸಿಸುತ್ತಿದ್ದ ಅನುಸೂಚಿತ ಬುಡಕಟ್ಟು ಜನರಿಗೆ ಅರಣ್ಯ ಹಕ್ಕು ಲಭಿಸುತ್ತದೆ. ಇತರ ಹಿಂದುಳಿದ ವ್ಯಕ್ತಿ ತನ್ನ ಜೀವನೋಪಾಯಕ್ಕಾಗಿ ಅರಣ್ಯ ಅವಲಂಬಿಸಿದ್ದರೆ ಸೌಲಭ್ಯ ಪಡೆಯಲು 75 ವರ್ಷಗಳ ಕಾಲ ಅವರ ಪೂರ್ವಜರು ಅರಣ್ಯದಲ್ಲೇ ಇದ್ದರು ಎಂಬುದನ್ನು ಸಾಬೀತುಪಡಿಸಲು ಸಾಕ್ಷ್ಯಗಳನ್ನು ಸಲ್ಲಿಸಬೇಕಾಗುತ್ತದೆ. ಅರಣ್ಯ ಹಕ್ಕಿಗಾಗಿ ಉತ್ತರ ಕನ್ನಡ ಜಿಲ್ಲೆಯ 80 ಸಾವಿರ ಕುಟುಂಬಗಳು ಅರ್ಜಿ ಸಲ್ಲಿಸಿವೆ. ಸರ್ವೆ ನಡೆಸಿ ಜಿಪಿಎಸ್‌ ಮ್ಯಾಪ್‌ ಸಹ ಸಿದ್ಧಪಡಿಸಲಾಗಿದೆ. ಕಾಯ್ದೆಯಲ್ಲಿನ ಕಠಿಣ ನಿಯಮಗಳಿಂದಾಗಿ ಅವರಿಗೆ ಅರಣ್ಯ ಹಕ್ಕು ಸಿಕ್ಕಿಲ್ಲ. ಹೀಗಾಗಿ, ಕಾಯ್ದೆಯಲ್ಲಿ ಕೆಲವೊಂದು ಮಾರ್ಪಾಡು ಮಾಡಬೇಕು’ ಎಂದು ಅವರು ಕೋರಿದರು. 

ಈ ಪ್ರಕರಣಗಳಲ್ಲಿ ಪುರಾವೆ ನೀಡುವುದು ಕಠಿಣವಾಗಿದೆ. ಇವರಿಗೆ ನ್ಯಾಯ ಮತ್ತು ಪರಿಹಾರ ಒದಗಿಸಲು ಅರಣ್ಯವಾಸಿ ಅನುಸೂಚಿತ ಬುಡಕಟ್ಟು ಸಮುದಾಯದವರಿಗೆ ಸಮಾನವಾಗಿ ಇತರ ಪಾರಂಪರಿಕ ಅರಣ್ಯ ವಾಸಿಗಳನ್ನು ಪರಿಗಣಿಸಲು ನಿಯಮಗಳಿಗೆ ಮಾರ್ಪಡು ಅಗತ್ಯ ಎಂದು ಖಂಡ್ರೆ ಪ್ರತಿಪಾದಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT