ಅಮಿತ್ ಶಾ, ಕುಮಾರಸ್ವಾಮಿ
ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಗುರುವಾರ ಭೇಟಿ ಮಾಡಿದ್ದಾರೆ.
ಅಮಿತ್ ಶಾ ಅವರ ಸಂಸತ್ ಕಚೇರಿಯಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವುದಾಗಿ ಕುಮಾರಸ್ವಾಮಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ರಾಜ್ಯ ಮತ್ತು ರಾಷ್ಟ್ರಕ್ಕೆ ಸಂಬಂಧಿಸಿದ ಮಹತ್ವದ ವಿಷಯಗಳು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಅಭಿವೃದ್ಧಿಗಳ ಬಗ್ಗೆ ಚರ್ಚೆ ಮಾಡಲಾಯಿತು ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ದೇಶ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು ಈ ವೇಳೆ ಅಮಿತ್ ಶಾ ಅವರ ಮಾರ್ಗದರ್ಶನ ಮತ್ತು ಬೆಂಬಲವು ಅತ್ಯಂತ ಮೌಲ್ಯಯುತವಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.