ADVERTISEMENT

ಅತಂತ್ರ ಸರ್ಕಾರ ಬೇಡ: ಅಮಿತ್ ಶಾ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2023, 10:14 IST
Last Updated 24 ಮಾರ್ಚ್ 2023, 10:14 IST
   

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಅತಂತ್ರ ಸ್ಥಿತಿಗೆ ಅವಕಾಶ ನೀಡದೆ, ಪೂರ್ಣ ಬಹುಮತದ ಬಿಜೆಪಿ ಸರ್ಕಾರ ರಚಿಸಲು ಅವಕಾಶ ಕಲ್ಪಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈಬಲಪಡಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದರು.

ನಗರದ ಕೊಮ್ಮಘಟ್ಟದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸಹಕಾರ ಇಲಾಖೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಮತ್ತು ಯೋಜನೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದಲ್ಲಿ ಕಾಂಗ್ರೆಸ್ ಸಮಾಪ್ತಿಯಾಗುತ್ತಿದೆ. ಭ್ರಷ್ಟಾಚಾರಕ್ಕಾಗಿ ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲು ಕಾಂಗ್ರೆಸ್ ಬಯಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.