ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೇಂದ್ರ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಗುರುವಾರ ಇಲ್ಲಿ ಭೇಟಿ ಮಾಡಿ ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದ ಬಗ್ಗೆ ಚರ್ಚಿಸಿದರು.
ಕರ್ನಾಟಕದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿ ಬಗ್ಗೆ ಶಾ ಮಾಹಿತಿ ಪಡೆದರು. ʼಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘಿಸಿ ರಾಜ್ಯ ಸರ್ಕಾರವು ಒಳಮೀಸಲಾತಿ ನೀಡಿದೆ. ಅಲೆಮಾರಿ ಸೇರಿದಂತೆ ಸಣ್ಣ ಸಮುದಾಯಗಳಿಗೆ ಅನ್ಯಾಯವಾಗಿದೆ. ಸರ್ಕಾರದ ವಿರುದ್ಧ ಹೋರಾಟ ಆರಂಭವಾಗಿದೆʼ ಎಂದು ಕುಮಾರಸ್ವಾಮಿ ಮಾಹಿತಿ ನೀಡಿದರು. ಒಳಮೀಸಲಾತಿಯ ರಾಜಕೀಯ ಪರಿಣಾಮಗಳ ಬಗ್ಗೆಯೂ ಮಾಹಿತಿ ಕೇಳಿದರು ಎಂದು ಮೂಲಗಳು ತಿಳಿಸಿವೆ.
ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.