ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರಿನ ವಿದ್ಯಾಪೀಠದಲ್ಲಿರುವ ಪೇಜಾವರ ಸ್ವಾಮೀಜಿಗಳ ಬೃಂದಾವನಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು.
ಪೌರತ್ವ (ತಿದ್ದುಪಡಿ) ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಹುಬ್ಬಳ್ಳಿಯಲ್ಲಿ ಆಯೋಜಿಸಿರುವ ಸಮಾವೇಶದಲ್ಲಿ ಭಾಗವಹಿಸಲೆಂದುಅಮಿತ್ ಶಾ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.
ಇದಕ್ಕೂ ಮೊದಲು ಅವರು ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಚೇರಿ ಉದ್ಘಾಟಿಸಿದರು. ಇದೇ ಕಾರ್ಯಕ್ರಮದಲ್ಲೇ ಅವರು ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿಗಳನ್ನು ಸನ್ಮಾನಿಸಿದರು.
ಬೃಂದಾವನ ಭೇಟಿ ನಂತರ ಅಮಿತ್ ಶಾ ಹುಬ್ಬಳ್ಳಿಗೆ ತೆರಳಲೆಂದು ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತೆರಳಿದರು. ಸಿಎಂ ಯಡಿಯೂರಪ್ಪ ಅವರೂ ಅವರೊಂದಿಗೇ ಕಾರಿನಲ್ಲಿ ತೆರಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.