ADVERTISEMENT

ಅಮಿತ್ ಶಾ–ಸೋಮಣ್ಣ ಭೇಟಿ: ರಾಜ್ಯ ಬಿಜೆಪಿಯಲ್ಲಿನ ಚಟುವಟಿಕೆ ಬಗ್ಗೆ ಚರ್ಚೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2025, 18:37 IST
Last Updated 11 ಫೆಬ್ರುವರಿ 2025, 18:37 IST
   

ನವದೆಹಲಿ: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಂಗಳವಾರ ಇಲ್ಲಿ ಭೇಟಿ ಮಾಡಿ ರಾಜ್ಯ ಬಿಜೆಪಿಯಲ್ಲಿನ ಚಟುವಟಿಕೆ ಬಗ್ಗೆ ಚರ್ಚಿಸಿದರು. 

ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬದಲಿಸಬೇಕು ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಬಣ ಪಟ್ಟು ಹಿಡಿದಿದೆ. ಪಕ್ಷದಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವವರನ್ನು ಅಧ್ಯಕ್ಷರನ್ನಾಗಿ
ಮಾಡಬೇಕು ಎಂಬುದು ಯತ್ನಾಳ ಬಣದ ಬೇಡಿಕೆ. ಈ ವಿಷಯವನ್ನು ವಿ.ಸೋಮಣ್ಣ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಗಮನಕ್ಕೆ ತಂದಿದೆ. ವರಿಷ್ಠರಿಗೆ ಈ ಸಂದೇಶವನ್ನು ತಲುಪಿಸುವಂತೆ ಅವರಲ್ಲಿ ಮನವಿ ಮಾಡಿದೆ. ಈ ಸಂಬಂಧ ಸೋಮಣ್ಣ, ಬೊಮ್ಮಾಯಿ, ಶಾಸಕ ಅರವಿಂದ ಬೆಲ್ಲದ, ಮಾಜಿ ಸಚಿವ ಮುರುಗೇಶ ನಿರಾಣಿ ಮತ್ತಿತರ ಲಿಂಗಾಯತ ನಾಯಕರು ಸೋಮವಾರ ಸುದೀರ್ಘವಾಗಿ ಸಮಾಲೋಚನೆ ನಡೆಸಿದ್ದಾರೆ. ಸೋಮಣ್ಣ ಅವರು ಈ ಸಂದೇಶವನ್ನು ಶಾ ಅವರಿಗೆ ರವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತುಮಕೂರು- ಚಿತ್ರದುರ್ಗ- ದಾವಣಗೆರೆ ರೈಲು ಯೋಜನೆಯ ಭಾಗವಾದ ತಿಮ್ಮರಾಜನಹಳ್ಳಿ ಮತ್ತು ತಾವರೆಕೆರೆ ಮಧ್ಯದ ಕಾಮಗಾರಿಗೆ ರೈಲ್ವೆ ಮಂಡಳಿಯು ಗೃಹ ಇಲಾಖೆಗೆ ಕಳುಹಿಸುವ ಪ್ರಸ್ತಾವನೆಗೆ ಅನುಮೋದನೆ ನೀಡುವಂತೆ ಶಾ ಅವರಲ್ಲಿ ಮನವಿ ಮಾಡಿದೆ. ಇದಕ್ಕೆ ಅವರು ಸ್ಪಂದಿಸಿದ್ದಾರೆ ಎಂದು ಸೋಮಣ್ಣ ತಿಳಿಸಿದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.