ಬೆಳಗಾವಿ: ‘ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೊಟ್ಟಿರುವ ಹೇಳಿಕೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಚಿಂತನೆಯನ್ನು ತೋರಿಸುತ್ತದೆ. ಅವರ ಹೇಳಿಕೆಯನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ ಹೇಳಿದರು.
ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಅಂಬೇಡ್ಕರ್ ಅವರು ದೇಶಕ್ಕೆ ತಮ್ಮದೇಯಾದ ಕೊಡುಗೆ ನೀಡಿದ್ದಾರೆ. ಅವರ ಬಗ್ಗೆ ಶಾ ಕೊಟ್ಟಿರುವ ಹೇಳಿಕೆಯನ್ನು ಖಂಡಿಸುತ್ತೇವೆ’ ಎಂದರು.
‘ಬಿಜೆಪಿ ಮತ್ತು ಆರ್‌ಎಸ್‌ಎಸ್‌ನವರು ಅಂಬೇಡ್ಕರ್ ಅವರನ್ನು ಒಪ್ಪಿಕೊಂಡಿಲ್ಲ ಎಂಬುದು ಶಾ ಅವರ ಹೇಳಿಕೆಯಿಂದ ಗೊತ್ತಾಗುತ್ತದೆ. ಬಿಜೆಪಿಯ ಮನುವಾದಿ ಚಿಂತನೆಗಳು ಶಾ ಹೇಳಿಕೆ ಮೂಲಕ ಬಹಿರಂಗಗೊಂಡಿವೆ. ಸಂಸತ್ತಿನಲ್ಲಿ ಉದ್ದೇಶಪೂರ್ವಕವಾಗಿಯೇ ಅವರು ಇಂಥ ಪದಗಳನ್ನು ಬಳಸಿದ್ದಾರೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.