
ಅಮಿತ್ ಶಾ
–ಪಿಟಿಐ ಚಿತ್ರ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ ತಿಂಗಳ ಕೊನೆಯಲ್ಲಿ ನಗರಕ್ಕೆ ಬರಲಿದ್ದು, ಲೋಕಸಭಾ ಚುನಾವಣೆ ಸಂಬಂಧ ರಾಜ್ಯದಲ್ಲಿ ಪಕ್ಷ ನಡೆಸುತ್ತಿರುವ ಸಿದ್ಧತೆಗಳನ್ನು ಪರಿಶೀಲನೆ ನಡೆಸಲಿದ್ದಾರೆ.
ಈ ಬಾರಿ 28 ಸ್ಥಾನಗಳನ್ನು ಗೆಲ್ಲುವ ಗುರಿ ಹಾಕಿಕೊಂಡಿರುವ ಬಿಜೆಪಿ ಇದಕ್ಕಾಗಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್‌ಗೆ ಮೂರು ಅಥವಾ ನಾಲ್ಕು ಸ್ಥಾನಗಳನ್ನು ಬಿಟ್ಟುಕೊಡುವ ಸಾಧ್ಯತೆ ಇದೆ.ಪಕ್ಷದ ಅಭ್ಯರ್ಥಿಗಳ ಆಯ್ಕೆ ಬಗ್ಗೆಯೂ ಶಾ ಅವರು ಪಕ್ಷದ ನಾಯಕ ಜತೆ ಚರ್ಚೆ ನಡೆಸಲಿದ್ದಾರೆ.
ಪಕ್ಷದಲ್ಲಿ ಮುನಿಸಿಕೊಂಡಿರುವ ನಾಯಕರನ್ನು ಸಮಾಧಾನಗೊಳಿಸಿ ಚುನಾವಣಾ ಕಾರ್ಯದಲ್ಲಿ ಅವರೆಲ್ಲರನ್ನು ತೊಡಗಿಸಿಕೊಳ್ಳಲು ವರಿಷ್ಠರು ಮುಂದಾಗಿದ್ದಾರೆ. ಶಾ ಅವರು ಬೆಂಗಳೂರಿಗೆ ಬಂದಾಗ ಸಣ್ಣ ಪುಟ್ಟ ಸಮಸ್ಯೆಗಳಿದ್ದರೂ ಅವುಗಳನ್ನು ಬಗೆಹರಿಸಲಿದ್ದಾರೆ. ಅತ್ಯಧಿಕ ಸ್ಥಾನಗಳನ್ನು ಗೆಲ್ಲುವ ಸಂಬಂಧ ಕಾರ್ಯತಂತ್ರಗಳನ್ನು ರೂಪಿಸಲು ಮಾರ್ಗದರ್ಶನ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.