ADVERTISEMENT

ರಾಜ್ಯಕ್ಕೆ ಇಂದು ಅಮಿತ್ ಶಾ

​ಪ್ರಜಾವಾಣಿ ವಾರ್ತೆ
Published 17 ಜನವರಿ 2020, 19:37 IST
Last Updated 17 ಜನವರಿ 2020, 19:37 IST
   

ಬೆಂಗಳೂರು: ಕೇಂದ್ರ ಗೃಹ ಸಚಿವರೂ ಆಗಿರುವ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ರಾಜ್ಯಕ್ಕೆ ಶನಿವಾರ ಭೇಟಿ ನೀಡಲಿದ್ದು, ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 12.15ಕ್ಕೆ ಬೆಂಗಳೂರಿಗೆ ಬರಲಿರುವ ಅವರು ಎಡತೊರೆ ಮಠದ ವೇದಾಂತ ಭಾರತಿ ಸಂಸ್ಥೆಯು ಇಲ್ಲಿನ ಅರಮನೆ ಮೈದಾನದ ಕೃಷ್ಣ ವಿಹಾರದಲ್ಲಿ ಹಮ್ಮಿಕೊಂಡಿರುವ ‘ವಿವೇಕ ದೀಪಿನಿ’ ಸ್ತೋತ್ರ ಸಮರ್ಪಣೆ ಹಾಗೂ ಸಾಮೂಹಿಕ ಪಠಣ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಹುಬ್ಬಳ್ಳಿಯನೆಹರೂ ಕ್ರೀಡಾಂಗಣದಲ್ಲಿ ಸಂಜೆ 5 ಗಂಟೆಗೆ ಪೌರತ್ವ (ತಿದ್ದುಪಡಿ) ಕಾಯ್ದೆಯ ಜಾಗೃತಿ ನಡೆಯಲಿದ್ದು, ಅದರಲ್ಲಿಯೂ ಶಾ ಪಾಲ್ಗೊಳ್ಳಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT