ಅಮ್ರಿತ್ ಪೌಲ್
ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿದ್ದ ಆರೋಪಿ ಐಪಿಎಸ್ ಅಧಿಕಾರಿ ಅಮ್ರಿತ್ ಪೌಲ್ ಅವರ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಅಮ್ರಿತ್ ಪೌಲ್ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಜೆ.ಎಂ.ಖಾಜಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ಅರ್ಜಿ ತಿರಸ್ಕರಿಸಿರುವುದಾಗಿ ತಿಳಿಸಿತು.
ಸಿಐಡಿ ಪರ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್ ಅವರ ವಾದ ಮನ್ನಿಸಿರುವ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು. ‘ನನ್ನ ವಿರುದ್ಧದ ಎಫ್‌ಐಆರ್, ಏಳು ದೋಷಾರೋಪ ಪಟ್ಟಿಗಳು ಮತ್ತು ವಿಚಾರಣಾ ನ್ಯಾಯಾಲಯದ ನ್ಯಾಯಿಕ ಪ್ರಕ್ರಿಯೆ ರದ್ದುಪಡಿಸಬೇಕು’ ಎಂದು ಕೋರಿ ಅಮ್ರಿತ್ ಪೌಲ್ ಈ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.