ಮುಳಬಾಗಿಲು: ನಗರದಲ್ಲಿ ಸೋಮವಾರ ಆಯೋಜಿಸಿದ್ದ ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಅಲ್ಪಸಂಖ್ಯಾತರ ಬೃಹತ್ ಸಮಾವೇಶದ ಮೆರವಣಿಗೆ ವೇಳೆ ಪಕ್ಷದ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರ ಮೇಲೆ ಕಾರ್ಯಕರ್ತರೊಬ್ಬರು ನೋಟುಗಳನ್ನು ಚೆಲ್ಲಿದರು.
ಸಂಗಮ ಟಾಕೀಸ್ ಮುಂಭಾಗ ತೆರೆದ ವಾಹನದಲ್ಲಿ ಸಾಗುತ್ತಿದ್ದಾಗ ₹ 10, 20, 50 ಮುಖಬೆಲೆಯ ಎರಡು ಕಂತೆಗಳನ್ನು ಎಸೆದರು.
ತಾಲ್ಲೂಕಿನ ವಿವಿಧೆಡೆಯಿದ ಟೆಂಪೊ ಹಾಗೂ ಬಸ್‌ಗಳಲ್ಲಿ ಬಂದಿದ್ದ ಸುಮಾರು ನಾಲ್ಕು ಸಾವಿರ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.