ADVERTISEMENT

ಚುನಾವಣಾ ಕರ್ತವ್ಯ: ಅಂಗನವಾಡಿ ಕಾರ್ಯಕರ್ತೆಯರಿಗೆ ವಿನಾಯಿತಿ; ಲಕ್ಷ್ಮೀ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 29 ಜುಲೈ 2025, 15:48 IST
Last Updated 29 ಜುಲೈ 2025, 15:48 IST
<div class="paragraphs"><p>ಅಂಗನವಾಡಿ</p></div>

ಅಂಗನವಾಡಿ

   

ಬೆಂಗಳೂರು: ‘ಚುನಾವಣಾ ಕೆಲಸಗಳಿಂದ ಅಂಗನವಾಡಿ ಕಾರ್ಯಕರ್ತೆಯರಿಗೆ ವಿನಾಯಿತಿ ನೀಡಲು ತೀರ್ಮಾನಿಸಲಾಗಿದೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.

ಆ ಮೂಲಕ, ಅಂಗನವಾಡಿ ಕಾರ್ಯಕರ್ತೆಯರ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.

ADVERTISEMENT

‘ಅಂಗನವಾಡಿ ಕೇಂದ್ರಗಳಲ್ಲಿ ಅಕ್ಟೋಬರ್‌ ತಿಂಗಳಿನಿಂದ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ, ಯುಕೆಜಿ) ತರಗತಿಗಳು ಆರಂಭಗೊಳ್ಳಲಿದೆ. ಕಾರ್ಯಕರ್ತೆಯರ ಒತ್ತಡವನ್ನು ಇಳಿಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ಅವರು ಹೇಳಿದರು.

‘ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ಜೊತೆ ಈ ವಿಚಾರ ಚರ್ಚೆ ನಡೆಸಿ ತೀರ್ಮಾನ ತೆಗೆದುಕೈಗೊಳ್ಳಲಾಗಿದೆ. ಸರ್ಕಾರ ಅಧಿಕೃತ ಆದೇಶ ಹೊರಡಿಸಬೇಕಾಗಿದೆ’ ಎಂದೂ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.