ಬೆಳಗಾವಿ: ವಿಧಾನಸಭೆ ಉಪ ಸಭಾಧ್ಯಕ್ಷರೂ ಆಗಿರುವ ಸವದತ್ತಿ- ಯಲ್ಲಮ್ಮ ಕ್ಷೇತ್ರದ ಶಾಸಕ ಆನಂದ (ವಿಶ್ವನಾಥ) ಮಾಮನಿ ಅವರಿಗೆ ಶುಕ್ರವಾರ ಕೋವಿಡ್- 19 ದೃಢಪಟ್ಟಿದೆ.
ಈ ಬಗ್ಗೆ ಅವರು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ವೈದ್ಯರು 17 ದಿನ ಮನೆಯಲ್ಲಿ ಪ್ರತ್ಯೇಕವಾಗಿ ಇರುವಂತೆ ಸೂಚಿಸಿದ್ದಾರೆ ಎಂದು ತಿಳಿಸಿದ್ದಾರೆ.
ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಉಪ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.