ADVERTISEMENT

ಶಿಕ್ಷಣ ಇಲಾಖೆಗೆ ಅನ್ಬುಕುಮಾರ್‌ ಆಯುಕ್ತ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2020, 21:36 IST
Last Updated 29 ಸೆಪ್ಟೆಂಬರ್ 2020, 21:36 IST

ಬೆಂಗಳೂರು: ಐಎಎಸ್‌ ಅಧಿಕಾರಿ ವಿ. ಅನ್ಬುಕುಮಾರ್‌ ಅವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರನ್ನಾಗಿ ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಲಾಗಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಐಎಎಸ್‌ ಅಧಿಕಾರಿ ಡಾ.ಕೆ.ಜಿ. ಜಗದೀಶ ಅವರು ಕೇಂದ್ರ ಸೇವೆಗೆ ತೆರಳಿದ್ದು, ಕಾಫಿ ಮಂಡಳಿಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಅವರನ್ನು ಮಂಗಳವಾರ ರಾಜ್ಯ ಸೇವೆಯಿಂದ ಬಿಡುಗಡೆ ಮಾಡಲಾಗಿದೆ.

ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ಸೋಮವಾರ ವರ್ಗಾವಣೆಯಾಗಿದ್ದು, ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್‌ ಅಧಿಕಾರಿ ಬಿ. ಶರತ್‌ ಅವರನ್ನು ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.