ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ₹1 ಸಾವಿರ ಹೆಚ್ಚಳಕ್ಕೆ ಕ್ರಮ: ಹೆಬ್ಬಾಳಕರ‌

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2025, 10:11 IST
Last Updated 18 ನವೆಂಬರ್ 2025, 10:11 IST
<div class="paragraphs"><p>ಲಕ್ಷ್ಮೀ ಹೆಬ್ಬಾಳಕರ</p></div>

ಲಕ್ಷ್ಮೀ ಹೆಬ್ಬಾಳಕರ

   

ತುಮಕೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಹಿಂದಿನ ಬಜೆಟ್‌ನಲ್ಲಿ ₹1 ಸಾವಿರ ಗೌರವ ಧನ ಹೆಚ್ಚಿಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಮತ್ತೆ ₹1 ಸಾವಿರ ಹೆಚ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ‌ ಭರವಸೆ ನೀಡಿದರು.

ನಗರದಲ್ಲಿ ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ (ಐಸಿಡಿಎಸ್) ಸುವರ್ಣ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ADVERTISEMENT

ಗೌರವ ಧನ ಹೆಚ್ಚಳದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆಗೆ ಚರ್ಚಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಲ್ಲಿ ಶೇ 70ರಷ್ಟು ಮಂದಿ ಗೃಹಲಕ್ಷ್ಮಿ ನೆರವು ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಸಹಕಾರ ಬ್ಯಾಂಕ್‌ನಲ್ಲಿ ₹30 ಸಾವಿರದಿಂದ ₹5 ಲಕ್ಷದ ವರೆಗೆ ಸಾಲ ವಿತರಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರ ಜತೆ ಮಾತನಾಡಿ, ‘ಹಿಂದಿನ ಎರಡು ತಿಂಗಳ ಗೃಹಲಕ್ಷ್ಮಿ ಹಣ ಬಾಕಿ ಇದೆ. ಆದಷ್ಟು ಶೀಘ್ರ ಬಿಡುಗಡೆ ಮಾಡಲಾಗುವುದು. ಇದಕ್ಕಾಗಿ ತಿಂಗಳಿಗೆ ₹2,500 ಕೋಟಿ ಬೇಕಾಗುತ್ತದೆ. ಕಾಲ ಕಾಲಕ್ಕೆ ಫಲಾನುಭವಿಗಳಿಗೆ ಯೋಜನೆಯ ನೆರವು ಕಲ್ಪಿಸಲಾಗುತ್ತಿದೆ’ ಎಂದು ತಿಳಿಸಿದರು.

ನ. 28ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅಕ್ಕ ಪಡೆ, ಸಹಕಾರ ಬ್ಯಾಂಕ್‌ಗೆ ಅಧಿಕೃತವಾಗಿ ಚಾಲನೆ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.