ADVERTISEMENT

ಉತ್ತರ ಕನ್ನಡದ ಮುಂಡಗೋಡ: ಪ್ರತಿಭಟನಾ ಮೆರವಣಿಗೆಯಲ್ಲಿ ಕುಸಿದುಬಿದ್ದು ಮಹಿಳೆ ಸಾವು

​ಪ್ರಜಾವಾಣಿ ವಾರ್ತೆ
Published 8 ಜನವರಿ 2019, 10:35 IST
Last Updated 8 ಜನವರಿ 2019, 10:35 IST
ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ
ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ   

ಮುಂಡಗೋಡ (ಉತ್ತರ ಕನ್ನಡ):ವಿವಿಧ ಕಾರ್ಮಿಕ ಸಂಘಟನೆಗಳು ಮಂಗಳವಾರ ಕರೆ ನೀಡಿದ್ದ ಭಾರತ ಬಂದ್‌ನ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಅಂಗನವಾಡಿ ಸಹಾಯಕಿಯೊಬ್ಬರು ಕುಸಿದುಬಿದ್ದು ಮೃತಪಟ್ಟಿದ್ದಾರೆ.

ಶಾಂತಾ ಬಸವಣ್ಣೆಪ್ಪ ಚಕ್ರಸಾಲಿ (57) ಮೃತರು. ಅವರು ಶಿಡ್ಲಗುಂಡಿ ಅಂಗನವಾಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪಟ್ಟಣದಲ್ಲಿ ಕೃಷಿ ಕೂಲಿಕಾರ ಸಂಘದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ಸಾಗಿತ್ತು. ತಾಲ್ಲೂಕು ಪಂಚಾಯ್ತಿ ಕಚೇರಿ ಸಮೀಪ ಬಂದಾಗ ಶಾಂತಾ ಕುಸಿದು ಬಿದ್ದರು. ಕೂಡಲೇ ತಾಲ್ಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಅಷ್ಟರಲ್ಲಿ ಅವರು ಮೃತಪಟ್ಟರು.

ವಿಷಯ ತಿಳಿದ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಆಸ್ಪತ್ರೆಯ ಮುಂದೆ ಜಮಾಯಿಸಿದ್ದಾರೆ. ಸ್ಥಳಕ್ಕೆ ಸಿಪಿಐ ಶಿವಾನಂದ ಚಲವಾದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ತಹಶೀಲ್ದಾರ್ ಅಶೋಕ ಗುರಾಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿ ಎಚ್.ಬಿ.ಬೈಲಪತ್ತಾರ್ ಕೂಡ ಆಸ್ಪತ್ರೆ ಭೇಟಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.