ADVERTISEMENT

‘ಮಹಿಳಾ ಮೇಲ್ವಿಚಾರಕಿ ಹುದ್ದೆಗಳಿಗೆ ನೇಮಿಸಿ’

ಅಂಗನವಾಡಿ ಕಾರ್ಯಕರ್ತೆಯರ ಕ್ಷೇಮಾಭಿವೃದ್ಧಿ ಸಮತಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 20:34 IST
Last Updated 12 ಮಾರ್ಚ್ 2020, 20:34 IST

ಬೆಂಗಳೂರು: ‘ಹತ್ತು ವರ್ಷ ಸೇವಾ ಅನುಭವ ಹೊಂದಿರುವ ಪದವೀಧರ ಅಂಗನವಾಡಿ ನೌಕರರನ್ನು ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಮಹಿಳಾ ಮೇಲ್ವಿಚಾರಕಿ ಹುದ್ದೆಗಳಿಗೆ ನೇಮಕ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಪದವೀಧರ ಅಂಗನವಾಡಿ ಕಾರ್ಯಕರ್ತೆಯರ ಕ್ಷೇಮಾಭಿವೃದ್ಧಿ ಸಮಿತಿ ಒತ್ತಾಯಿಸಿದೆ.

ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಸಮಿತಿಯ ರಾಜ್ಯ ಘಟಕದ ಅಧ್ಯಕ್ಷೆ ಟಿ.ಎನ್.ತನುಜಾ ಮಾತನಾಡಿ, ‘ರಾಜ್ಯದಲ್ಲಿ 1.25 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಕಾರ್ಯನಿರ್ವಹಿಸುತ್ತಿದ್ದಾರೆ. 35 ವರ್ಷಗಳಿಂದ ಪದವೀಧರ ಅಂಗನವಾಡಿ ಕಾರ್ಯಕರ್ತೆಯರು ಅಲ್ಪ ಗೌರವಧನಕ್ಕೆ ದುಡಿಯುತ್ತಿದ್ದಾರೆ. ವಿದ್ಯಾರ್ಹತೆಗೆ ಅನುಗುಣವಾದ ಹುದ್ದೆಗಳನ್ನು ನೀಡದೇ ಸರ್ಕಾರಗಳು ಅನ್ಯಾಯ ಮಾಡಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಮೇಲ್ವಿಚಾರಕಿಯರು ಹಾಗೂ ಪ್ರಥಮದರ್ಜೆ ಮತ್ತು ದ್ವಿತೀಯ ದರ್ಜೆ ಸಹಾಯಕಿಯರ ಹುದ್ದೆಗಳನ್ನು ನೀಡುವ ಮೂಲಕ ಬಡ್ತಿ ನೀಡಬೇಕು’ ಎಂದು ಒತ್ತಾಯಿಸಿದರು.

‘2004ರ ಮಾದರಿಯಲ್ಲಿಯೇ ನೇರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಬೇಕು. ಕೆಪಿಎಸ್‌ಸಿಗೆ ನೇಮಕಾತಿಗೆ ಅವಕಾಶ ನೀಡಬಾರದು. ಸಮಾಜಶಾಸ್ತ್ರ ವಿಭಾಗದಲ್ಲಿ ಪದವಿ ಪೂರೈಸಿದವರಿಗೆ ಮೊದಲ ಆದ್ಯತೆ ನೀಡಬೇಕು. 15 ವರ್ಷ ಸೇವಾ ಅನುಭವ ಇರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಪದವೀಧರ ಅಂಗನವಾಡಿ ಕಾರ್ಯಕರ್ತೆಯರಿಗೆ ರೋಸ್ಟರ್ ಪದ್ಧತಿಯಲ್ಲಿ ಹುದ್ದೆಗಳನ್ನು ನೀಡಬೇಕು’ ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.