ADVERTISEMENT

ಜ.10ಕ್ಕೆ ಅಂಗನವಾಡಿ ನೌಕರರ ಪ್ರತಿಭಟನೆ- ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 16:45 IST
Last Updated 7 ಜನವರಿ 2022, 16:45 IST
ಎಸ್‌.ವರಲಕ್ಷ್ಮೀ
ಎಸ್‌.ವರಲಕ್ಷ್ಮೀ   

ಬೆಂಗಳೂರು: ‘ಅಂಗನವಾಡಿ ಕೇಂದ್ರಗಳನ್ನು ಗ್ರಾಮ ಪಂಚಾಯಿತಿಗಳ ಉಸ್ತುವಾರಿಗೆ ವಹಿಸುವುದನ್ನು ವಿ‌ರೋಧಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜನವರಿ 10ರಿಂದ ಅಂಗನವಾಡಿ ನೌಕರರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಎಸ್.ವರಲಕ್ಷ್ಮಿಶುಕ್ರವಾರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅವರು, ‘ರಾಷ್ಟ್ರೀಯ ಶಿಕ್ಷಣ ನೀತಿಯು (ಎನ್‌ಇಪಿ) ಸಮಗ್ರ ಶಿಶು ಅಭಿವೃದ್ಧಿ ಯೋಜನೆಗೆ (ಐಸಿಡಿಎಸ್) ಪೂರಕವಾಗಿಲ್ಲ. ಸರ್ಕಾರಗಳು ಅಂಗನವಾಡಿಗಳ ಉಳಿವಿನತ್ತ ಗಮನ ಹರಿಸಿ, ಐಸಿಡಿಎಸ್ ಯೋಜನೆಯನ್ನು ಬಲಗೊಳಿಸಬೇಕು’ ಎಂದು ಒತ್ತಾಯಿಸಿದರು.

‘3 ವರ್ಷದೊಳಗಿನ ಮಕ್ಕಳಿಗೆ ಶಿಶುಪಾಲನಾ ಕೇಂದ್ರ, 3ರಿಂದ 6 ವರ್ಷದ ಮಕ್ಕಳಿಗೆ ಅಂಗನವಾಡಿ ಕೇಂದ್ರ, 6ನೇ ವರ್ಷಕ್ಕೆ ಮಕ್ಕಳು 1ನೇ ತರಗತಿಗೆ ಸೇರಬೇಕು. 6 ವರ್ಷದೊಳಗಿನ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಉಚಿತ ಮತ್ತು ಕಡ್ಡಾಯಗೊಳಿಸಲು ಪ್ರತ್ಯೇಕ ಕಾಯ್ದೆ ರೂಪಿಸಬೇಕು. ಅಂಗನವಾಡಿ ಕೇಂದ್ರಗಳನ್ನುಪಂಚಾಯಿತಿ ಹಿಡಿತಕ್ಕೆ ವಹಿಸುವ ಆದೇಶವನ್ನು ಕೂಡಲೇ ಹಿಂಪಡೆಯಬೇಕು’ ಎಂದು ಹೇಳಿದರು.

ADVERTISEMENT

‘ಕೋವಿಡ್‌ ಉಲ್ಬಣಗೊಂಡಿರುವುದರಿಂದ ಬೆಂಗಳೂರಿನಲ್ಲಿ ಮಾತ್ರಪ್ರತಿಭಟನೆ ಮುಂದೂಡಿದ್ದೇವೆ. ಉಳಿದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿಗಳ ಎದುರು ಜ.10ರಿಂದ ಅಂಗನವಾಡಿ ನೌಕರರಿಂದ ಪ್ರತಿಭಟನೆ ನಡೆಯಲಿದೆ. ಕೋವಿಡ್‌ ನಿಯಂತ್ರಣಕ್ಕೆ ಬಂದ ನಂತರ ಬೆಂಗಳೂರಿನಲ್ಲೂ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ವರಲಕ್ಷ್ಮಿ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.