ADVERTISEMENT

ಪಿಂಚಣಿ, ಗೌರವ ಧನಕ್ಕಾಗಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2021, 8:46 IST
Last Updated 2 ಮಾರ್ಚ್ 2021, 8:46 IST
   

ಬೆಂಗಳೂರು: ಹಿರಿತನ ಆಧಾರದಲ್ಲಿ ಗೌರವ ಧನ ಹೆಚ್ಚಳ ಮಾಡಬೇಕು ಹಾಗೂ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ‌ಉದ್ಯಾನದವರೆಗೆ ಪ್ರತಿಭಟನಕಾರರು, ಬೃಹತ್ ಮೆರವಣಿಗೆ ನಡೆಸಿದರು.

ಉದ್ಯಾನದಲ್ಲಿ ಬಹಿರಂಗ ಸಭೆ ಆಯೋಜಿಸಿರುವ ಪ್ರತಿಭಟನಕಾರರು, ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಘೋಷಣಾ ಫಲಕಗಳನ್ನು ಪ್ರದರ್ಶಿಸುತ್ತಿದ್ದಾರೆ.

ADVERTISEMENT

'ಉಚಿತ ವೈದ್ಯಕೀಯ ಸೌಲಭ್ಯ ಅಥವಾ ಇಎಸ್‌ಐ ಸೌಲಭ್ಯ ಕಲ್ಪಿಸಬೇಕು. ಪಿಂಚಣಿ ಯೋಜನೆಯನ್ನು ಜಾರಿಗೆ ತರಬೇಕು. ಸೇವಾ ನಿರತ ಆಧಾರದಲ್ಲಿ ಗೌರವಧನ ಹೆಚ್ಚಳ ಮಾಡಬೇಕು. ಕೊರೊನಾ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ನಮಗೆ ಪರಿಹಾರ ಧನ ನೀಡಬೇಕು' ಎಂದು ಪ್ರತಿಭಟನಕಾರರು ಒತ್ತಾಯಿಸುತ್ತಿದ್ದಾರೆ.

ಪ್ರತಿಭಟನೆಯಿಂದಾಗಿ‌ ಉದ್ಯಾನ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.