ADVERTISEMENT

ಅನಿತಾ ಕುಮಾರಸ್ವಾಮಿ ತೆಲುಗು ಮೂಲದವರು: ವೈರಲ್ ಆಯ್ತು ಎಚ್‌ಡಿಕೆ ಹೇಳಿಕೆಯ ವಿಡಿಯೊ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2019, 9:55 IST
Last Updated 5 ಫೆಬ್ರುವರಿ 2019, 9:55 IST
   

ಮಂಡ್ಯ: ಆಂಧ್ರಪ್ರದೇಶದ ಖಾಸಗಿ ವಾಹಿನಿಯೊಂದಕ್ಕೆ ನೀಡಿದ್ದ ನಂದರ್ಶನವೊಂದರಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ‘ನನ್ನ ಪತ್ನಿ ಅನಿತಾ ತೆಲುಗು ಮೂಲದವರು’ ಎಂಬ ಹೇಳಿಕೆ ನೀಡಿರುವವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಜೆಡಿಎಸ್‌ ಮುಖಂಡರು ಅಂಬರೀಷ್‌ ಪತ್ನಿ ಸುಮಲತಾ ಅವರ ಮೂಲ ಪ್ರಶ್ನೆ ಮಾಡಿರುವ ಸಂದರ್ಭದಲ್ಲಿ ಈ ವಿಡಿಯೊ ಚರ್ಚೆಗೆ ಗ್ರಾಸವಾಗಿದೆ. ನಿಖಿಲ್‌ ಕುಮಾರಸ್ವಾಮಿ ಅವರ ಅಭಿನಯದ ಮೊದಲ ಚಿತ್ರ‘ಜಾಗ್ವಾರ್‌’(ತೆಲುಗು ಅವತರಣಿಕೆ) ಬಿಡುಗಡೆ ವೇಳೆ ಅವರು ಸಂದರ್ಶನ ನೀಡಿದ್ದಾರೆ.

ತೆಲುಗು ಭಾಷೆಯ ಪರಿಚಯದ ಬಗ್ಗೆ ಮಾತನಾಡುವಾಗ ಕುಮಾರಸ್ವಾಮಿ ಅವರು ತನ್ನ ಪತ್ನಿ ಅನಿತಾ ತೆಲುಗು ಮೂಲದವರಾಗಿದ್ದು ಭಾಷೆಯ ಪರಿಚಯವಿದೆ ಎಂದು ತಿಳಿಸಿದ್ದಾರೆ. ಸಂದರ್ಶನದಲ್ಲಿ ನಿಖಿಲ್‌ ಕುಮಾರಸ್ವಾಮಿ ಕೂಡ ಧ್ವನಿಗೂಡಿಸಿದ್ದಾರೆ.

ಈ ವಿಡಿಯೊ ವೈರಲ್‌ ಆಗಿದ್ದು ಪರ–ವಿರೋಧ ಚರ್ಚೆಗೆ ಕಾರಣವಾಗಿದೆ. ಸುಮಲತಾ ಅವರನ್ನು ಮಂಡ್ಯ ಗೌಡ್ತಿ ಅಲ್ಲ ಎನ್ನುವ ಜೆಡಿಎಸ್‌ ಮುಖಂಡರು ಅನಿತಾ ಅವರನ್ನು ಮಂಡ್ಯ ಗೌಡ್ತಿ ಎನ್ನುವರೇ ಎಂದು ಅಂಬರೀಷ್‌ ಅಭಿಮಾನಿಗಳು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.