ADVERTISEMENT

ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 20 ಮೇ 2024, 10:42 IST
Last Updated 20 ಮೇ 2024, 10:42 IST
ವಿಧಾನ ಸೌಧ
ವಿಧಾನ ಸೌಧ   

ಬೆಂಗಳೂರು: ಮುಂದಿನ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದ್ದು, ಜೂನ್‌ 13ರಂದು ಮತದಾನ ನಡೆಯಲಿದೆ.

ನಾಮಪತ್ರ ಸಲ್ಲಿಸಲು ಜೂನ್‌ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ.

ಮತದಾನ ದಿನ ಸಂಜೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.

ADVERTISEMENT

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಚುನಾಯಿತರಾಗಿರುವ 11 ಸದಸ್ಯರ ಅವಧಿ ಜೂನ್‌ 17ಕ್ಕೆ ಕೊನೆಗೊಳ್ಳಲಿದೆ. ಅರವಿಂದ ಕುಮಾರ್ ಅರಳಿ, ಎನ್.ಎಸ್. ಬೋಸರಾಜು, ಕೆ.ಗೋವಿಂದರಾಜ್, ಡಾ.ತೇಜಸ್ವಿನಿ ಗೌಡ , ಮುನಿರಾಜುಗೌಡ ಪಿ.ಎಂ., ಕೆ.ಪಿ. ನಂಜುಂಡಿ, ಬಿ.ಎಂ. ಫಾರೂಕ್, ರಘುನಾಥ ರಾವ್ ಮಲ್ಕಾಪುರೆ, ಎನ್. ರವಿಕುಮಾರ್, ಎಸ್.ರುದ್ರೇಗೌಡ, ಕೆ.ಹರೀಶ್ ಕುಮಾರ್ ಅವರ ಅವಧಿ ಕೊನೆಗೊಳ್ಳಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.