ADVERTISEMENT

ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ಮತ್ತೊಬ್ಬ ದಲಿತ ಅಧಿಕಾರಿ ಬಲಿ: ಆರ್‌. ಅಶೋಕ

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2024, 10:53 IST
Last Updated 3 ಆಗಸ್ಟ್ 2024, 10:53 IST
<div class="paragraphs"><p>ಆರ್‌. ಅಶೋಕ </p></div>

ಆರ್‌. ಅಶೋಕ

   

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್ ಅವರನ್ನು ಬಲಿ ಪಡೆದ ಕಾಂಗ್ರೆಸ್ ಸರ್ಕಾರ, ಈಗ ವರ್ಗಾವಣೆಗಾಗಿ ಲಂಚದ ಬೇಡಿಕೆ ಇಟ್ಟು ಮತ್ತೊಬ್ಬ ದಲಿತ ಅಧಿಕಾರಿ ಪಿಎಸ್ಐ ಪರಶುರಾಮ್ ಅವರನ್ನ ಬಲಿ ಪಡೆದುಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಆರೋಪಿಸಿದ್ದಾರೆ.

ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂಬಂತೆ, ಮುಖ್ಯಮಂತ್ರಿಗಳು, ಸಚಿವರು ಭ್ರಷ್ಟಾಚಾರಕ್ಕೆ ಇಳಿದಿರುವಾಗ ಇನ್ನು ಶಾಸಕರು ಸುಮ್ಮನಿರುತ್ತಾರೆಯೇ? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ADVERTISEMENT

ಒತ್ತಡ, ಮಾನಸಿಕ ಕಿರುಕುಳದಿಂದ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಯಾದಗಿರಿ ಪಿಎಸ್‌ಐ ಪರಶುರಾಮ್ ಅವರ ಸಾವಿಗೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಮತ್ತು ಅವರ ಪುತ್ರ ಸನ್ನಿಗೌಡ ಕಾರಣ ಎಂದು ಅವರ ಪತ್ನಿ ಮತ್ತು ಕುಟುಂಬಸ್ಥರು ಗಂಭೀರ ಆರೋಪ ಮಾಡಿ ಲಿಖಿತ ದೂರು ಕೊಟ್ಟಿದ್ದಾರೆ.

ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಉಳಿಗಾಲವಿಲ್ಲದಂತಾಗಿದ್ದು, ಈ ಕೂಡಲೇ ಶಾಸಕ ಚೆನ್ನಾರೆಡ್ಡಿ ಅವರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು ಮತ್ತು ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು ಎಂದು ಅಶೋಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಅವರು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಹಾಗೇ ಪರಶುರಾಮ್ ಅವರ ಪತ್ನಿ ನೀಡಿರುವ ದೂರಿನ ಪ್ರತಿಯನ್ನು ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.