ಮಂಗಳವಾರವಷ್ಟೆ ನಮ್ಮ ಮೆಟ್ರೊ ಕಾಮಗಾರಿಯು ಎರಡು ಜೀವಗಳನ್ನು ಬಲಿ ಪಡೆದಿತ್ತು. ಇದೀಗ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನಿಗೆ ಗಾಯವಾಗಿರುವಂತಹ ಘಟನೆ ನಗರದ ಬ್ರಿಗೇಡ್ ರಸ್ತೆಯಲ್ಲಿ ನಡೆದಿದೆ. ಮೆಟ್ರೊ ಕಾಮಗಾರಿ ಹಿನ್ನೆಲೆಯಲ್ಲಿ ಬ್ರಿಗೇಡ್ ಟವರ್ ಬಳಿಯ ಜಾನ್ಸನ್ ಮಾರ್ಕೆಟ್ ರಸ್ತೆಯ ಮಧ್ಯೆ ಭಾಗದಲ್ಲಿ ಏಕಾಏಕಿ ಗುಂಡಿ ಬಿದ್ದು ಅವಘಡ ಉಂಟಾಗಿದೆ. ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.