ADVERTISEMENT

ದಕ್ಷಿಣ ಕನ್ನಡ | ಕೋವಿಡ್‌ಗೆ ಮೃತ ಮಹಿಳೆಯ ಅತ್ತೆಯೂ ಸಾವು

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2020, 14:37 IST
Last Updated 23 ಏಪ್ರಿಲ್ 2020, 14:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮಂಗಳೂರು: ಕೋವಿಡ್‌–19 ಸೋಂಕಿನಿಂದ ಮೃತಪಟ್ಟ ಬಂಟ್ವಾಳದ 50 ವರ್ಷದ ಮಹಿಳೆಯ ಅತ್ತೆಯೂ ಗುರುವಾರ ಮೃತಪಟ್ಟಿದ್ದು, ಕೋವಿಡ್‌–19 ಸೋಂಕು ದೃಢಪಟ್ಟಿದೆ.

ಪಾರ್ಶ್ವವಾಯು ಪೀಡಿತರಾಗಿದ್ದ 75 ವರ್ಷದ ಈ ಮಹಿಳೆಯನ್ನು ಮಾರ್ಚ್‌ 18 ರಂದು ನಗರದ ಫಸ್ಟ್‌ ನ್ಯೂರೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ, ತೀವ್ರ ಉಸಿರಾಟದ ತೊಂದರೆ ಬಳಲುತ್ತಿದ್ದ ಇವರನ್ನು ಬುಧವಾರ ನಗರದ ವೆನ್ಲಾಕ್‌ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಮಹಿಳೆಯ ಗಂಟಲು ದ್ರವದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ಗುರುವಾರ ಸೋಂಕು ದೃಢಪಟ್ಟಿತ್ತು. ಸಂಜೆ ಅವರ ಮೃತಪಟ್ಟಿದ್ದಾರೆ.

ಕೋವಿಡ್‌–19 ಸೋಂಕಿನಿಂದ ಒಂದೇ ಕುಟುಂಬದ ಇಬ್ಬರು ಮಹಿಳೆಯರು ಮೃತಪಟ್ಟಿದ್ದಾರೆ. ಒಟ್ಟು 17 ಪ್ರಕರಣಗಳು ದೃಢಪಟ್ಟಿದ್ದು, 12 ಮಂದಿ ಗುಣಮುಖರಾಗಿದ್ದಾರೆ. ಇನ್ನೂ ಮೂವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.