ADVERTISEMENT

ಬಂಟ್ವಾಳದ ಮತ್ತೊಬ್ಬ ಮಹಿಳೆಗೂ ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2020, 8:14 IST
Last Updated 21 ಏಪ್ರಿಲ್ 2020, 8:14 IST
ಕೊರೊನಾ ವೈರಸ್
ಕೊರೊನಾ ವೈರಸ್   

ಮಂಗಳೂರು: ಕೋವಿಡ್- 19ನಿಂದ ಭಾನುವಾರ ಮೃತಪಟ್ಟ ಬಂಟ್ವಾಳದ ಕಸಬಾ ಗ್ರಾಮದ ಮಹಿಳೆಯ‌ ನೆರೆಮನೆಯ ಮಹಿಳೆಯಲ್ಲೂ ಕೊರೊನಾ ವೈರಸ್ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ.

ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 16ಕ್ಕೇರಿದೆ. 12 ಮಂದಿ ಗುಣಮುಖರಾಗಿದ್ದು, ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬ ಮಹಿಳೆ ಮೃತಪಟ್ಟಿದ್ದಾರೆ.

ಕಸಬಾ ಗ್ರಾಮದ 50 ವರ್ಷದ ಮಹಿಳೆ ಕೋವಿಡ್-19 ಸೋಂಕಿನಿಂದ ಭಾನುವಾರ ಮೃತಪಟ್ಟಿದ್ದರು. ಅವರ ನೆರೆಮನೆಯ 67 ವರ್ಷದ ಮಹಿಳೆಯಲ್ಲೂ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ಅವರನ್ನು ಶನಿವಾರ ಮಧ್ಯಾಹ್ನ ವೆನ್ಲಾಕ್ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ADVERTISEMENT

ಅದೇ ದಿನ ಅವರ ಗಂಟಲಿನ ದ್ರವದ ಮಾದರಿಯನ್ನು ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಮಂಗಳವಾರ ವರದಿ ಲಭಿಸಿದ್ದು, ಈ ಮಹಿಳೆಯಲ್ಲಿ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದೆ' ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.