ADVERTISEMENT

ದೆಹಲಿ ಗಲಭೆ| ಸರ್ವಶಕ್ತ ಸಚಿವ ಅಮಿತ್ ಶಾ ಕಣ್ಮುಚ್ಚಿ ಕುಳಿತಿದ್ದಾರೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 25 ಫೆಬ್ರುವರಿ 2020, 10:44 IST
Last Updated 25 ಫೆಬ್ರುವರಿ 2020, 10:44 IST
   

ಬೆಂಗಳೂರು: ದೆಹಲಿಯಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಣ್ಣುಮುಚ್ಚಿ ಕುಳಿತಿದ್ದಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

‘ಏಳು ಜೀವಗಳನ್ನು ಬಲಿತೆಗೆದುಕೊಂಡ ದೆಹಲಿ ಗಲಭೆ ಅತ್ಯಂತ ಖೇದಕರವಾದರೂ ಅನಿರೀಕ್ಷಿತವೇನಲ್ಲ. ಬಿಜೆಪಿಯ ಸಚಿವರು, ಶಾಸಕರು ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದಾಗಲೂ ‘ಸರ್ವಶಕ್ತ’ ಗೃಹಸಚಿವ ಅಮಿತ್ ಶಾ ಅವರು ಕಣ್ಣುಮುಚ್ಚಿ ಕುಳಿತಿರುವುದೇ ಈ ಗಲಭೆಗೆ ಕಾರಣ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

‘ದೆಹಲಿಯಲ್ಲಿ ಹಿಂಸಾಚಾರಕ್ಕೆ ಬಹಿರಂಗವಾಗಿ ಪ್ರಚೋದನೆ ನೀಡಿರುವ ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರನ್ನು ತಕ್ಷಣ ಬಂಧಿಸಬೇಕು. ಗಲಭೆಗ್ರಸ್ತ ಪ್ರದೇಶಕ್ಕೆ ಅವಶ್ಯಕ ಪ್ರಮಾಣದಲ್ಲಿ ಪೊಲೀಸರನ್ನು ನೇಮಿಸಿ ಭೀತಿಗ್ರಸ್ತ ಜನರಲ್ಲಿ ವಿಶ್ವಾಸ ತುಂಬಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.