ADVERTISEMENT

ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ: ಪ್ರಭು ಚವ್ಹಾಣ್

​ಪ್ರಜಾವಾಣಿ ವಾರ್ತೆ
Published 27 ನವೆಂಬರ್ 2020, 8:19 IST
Last Updated 27 ನವೆಂಬರ್ 2020, 8:19 IST
ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್
ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್   

ಬೆಂಗಳೂರು: ಡಿಸೆಂಬರ್ 7ರಿಂದ ಪ್ರಾರಂಭವಾಗಲಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮಂಡಿಸಲಾಗುವುದು ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದರು.

ಸಚಿವ ಸಂಪುಟ ಸಭೆಯ ಬಳಿಕ ವಿಧಾನ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಿಷ್ಕೃತ ಹಾಗೂ ಸಮಗ್ರ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸುವುದಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದರು.

ಗೋಹತ್ಯೆ ನಿಷೇಧ ಮಸೂದೆಯನ್ನು 2010ರಲ್ಲಿ ರಾಜ್ಯ ಸರ್ಕಾರ ಅಂಗೀಕರಿಸಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆದರೆ, ಆಗಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ತಿರಸ್ಕರಿಸಿತ್ತು.

ADVERTISEMENT

ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಬದ್ಧವಾಗಿದ್ದು, ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತಿದೆ ಎಂದು ಪ್ರಭು ಚವ್ಹಾಣ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.