ಬೆಂಗಳೂರು: ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಕಳ್ಳ ಬೇಟೆ ನಿಯಂತ್ರಣ ಕ್ರಮಗಳ ಬಗ್ಗೆ ಜರ್ಮನಿಯ ಸಂಸದರ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.
ಜರ್ಮನಿಯ ಸಂಸದರಾದ ಜೇನ್ಸ್ ಗೀಯರ್ ಮತ್ತು ಬೆಂಗ್ಟ್ ಬರ್ಗ್ಟ್ ಅವರು ಶನಿವಾರ ಸಚಿವ ಈಶ್ವರ ಖಂಡ್ರೆ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ರಾಜ್ಯದಲ್ಲಿ ಕಳ್ಳಬೇಟೆ ನಿಯಂತ್ರಣ ಮತ್ತು ವನ್ಯಜೀವಿ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಸಚಿವರು ಸಭೆಯಲ್ಲಿ ವಿವರಿಸಿದರು. ಅವುಗಳನ್ನು ಪರಿಶೀಲಿಸಿದ ಜರ್ಮನಿ ನಿಯೋಗವು ಮೆಚ್ಚುಗೆ ವ್ಯಕ್ತಪಡಿಸಿತು.
ಜತೆಗೆ ತಾಪಮಾನ ಏರಿಕೆ, ಹವಾಮಾನ ಬದಲಾವಣೆ, ಇಂಗಾಲ ಹೊರಸೂಸುವಿಕೆ ಪ್ರಮಾಣ ತಗ್ಗಿಸಲು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ದೀರ್ಘ ಚರ್ಚೆ ನಡೆಯಿತು. ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಬ್ರಿಜೇಶ್ ದೀಕ್ಷಿತ್, ಸುಭಾಷ್ ಮಾಲ್ಕಡೆ, ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿ ವಿಜಯ ಮೋಹನ ರಾಜ್ ಸಭೆಯಲ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.