ADVERTISEMENT

ನ್ಯಾ.ಶಿವರಾಜ ಪಾಟೀಲಗೆ ಅನುಭವ ಮಂಟಪ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2023, 23:30 IST
Last Updated 8 ನವೆಂಬರ್ 2023, 23:30 IST
ನ್ಯಾ.ಶಿವರಾಜ ಪಾಟೀಲ
ನ್ಯಾ.ಶಿವರಾಜ ಪಾಟೀಲ   

ಬಸವಕಲ್ಯಾಣ (ಬೀದರ್‌ ಜಿಲ್ಲೆ): ವಿಶ್ವ ಬಸವಧರ್ಮ ವಿಶ್ವಸ್ಥ ಮಂಡಳಿಯ ಪ್ರಸಕ್ತ ಸಾಲಿನ ‘ಡಾ.ಚನ್ನಬಸವ ಪಟ್ಟದ್ದೇವರು ಅನುಭವ ಮಂಟಪ ಪ್ರಶಸ್ತಿ’ಗೆ ನಿವೃತ್ತ ನ್ಯಾಯಮೂರ್ತಿ ಶಿವರಾಜ ಪಾಟೀಲ ಅವರನ್ನು ಆಯ್ಕೆ ಮಾಡಲಾಗಿದೆ.

ರಾಯಚೂರು ಜಿಲ್ಲೆಯವರಾದ ಇವರು ರಾಷ್ಟ್ರೀಯ ಮಾನವ ಹಕ್ಕುಗಳ ಅಧ್ಯಕ್ಷರೂ ಆಗಿದ್ದರು. ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಫಲಕ ಒಳಗೊಂಡಿದೆ. ವಿಶ್ವಸ್ಥ ಮಂಡಳಿ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರ ನೇತೃತ್ವದ ಸಮಿತಿಯು ಪ್ರಶಸ್ತಿಗೆ ಆಯ್ಕೆ ಮಾಡಿದೆ. ನ.25ರಂದು ನಡೆಯುವ ಅನುಭವ ಮಂಟಪ ಉತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಂಡಳಿ ಕಾರ್ಯದರ್ಶಿ ಡಾ.ಎಸ್.ಬಿ.ದುರ್ಗೆ ತಿಳಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT