
 ಪ್ರಜಾವಾಣಿ ವಾರ್ತೆ
ಪ್ರಜಾವಾಣಿ ವಾರ್ತೆ
ಎಸ್.ಜಿ ಸುಶೀಲಮ್ಮ
ಬೆಂಗಳೂರು: ಬೀದರ್‌ನ ಭಾಲ್ಕಿ ಮಠ ನೀಡುವ ‘ಅನುಭವ ಮಂಟಪ ಪ್ರಶಸ್ತಿ’ಗೆ ಬೆಂಗಳೂರಿನ ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್.ಜಿ.ಸುಶೀಲಮ್ಮ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮಠದ ಬಸವಲಿಂಗ ಪಟ್ಟದೇವರು ಸ್ವಾಮೀಜಿ ಹೇಳಿದರು.
ನಗರದಲ್ಲಿ ಗುರುವಾರ ನಡೆದ ಸುಮಂಗಲಿ ಸೇವಾಶ್ರಮದ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ದಶಕಗಳಿಂದ ಸೇವಾಶ್ರಮವನ್ನು ನಡೆಸಿಕೊಂಡು ಬರುತ್ತಿರುವ ಸುಶೀಲಮ್ಮ ಅವರೇ ಪ್ರಶಸ್ತಿಗೆ ಅರ್ಹರು ಎಂದು ಮೂರು ದಿನಗಳ ಹಿಂದೆ ನಡೆದ ಆಯ್ಕೆ ಸಮಿತಿ ಸಭೆ ತೀರ್ಮಾನಿಸಿತು. ಬಸವ ಕಲ್ಯಾಣದಲ್ಲಿ ನವೆಂಬರ್ 29ರಂದು ನಡೆಯುವ ಶರಣ ಕಮ್ಮಟದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ₹1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.