
ಪ್ರಜಾವಾಣಿ ವಾರ್ತೆ
ಸುವರ್ಣ ವಿಧಾನಸೌಧ (ಬೆಳಗಾವಿ): ಪರಿಶಿಷ್ಟಜಾತಿಯವರಿಗೆ ಒಳಮೀಸಲಾತಿ ಕಲ್ಪಿಸುವ ಸರ್ಕಾರಿ ಆದೇಶಗಳು ಮತ್ತು ಸುತ್ತೋಲೆಗಳಿಗೆ ಕಾನೂನಾತ್ಮಕ ರಕ್ಷಣೆ ನೀಡುವ ಉದ್ದೇಶದ ಮಸೂದೆಗೆ ವಿಧಾನ ಪರಿಷತ್ತು ಅಂಗೀಕಾರ ನೀಡಿದೆ.
ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ವಿಧಾನ ಪರಿಷತ್ತಿನಲ್ಲಿ ‘ಕರ್ನಾಟಕ ಅನುಸೂಚಿತ ಜಾತಿಗಳ (ಉಪವರ್ಗೀಕರಣ) ಮಸೂದೆಯನ್ನು ಪರ್ಯಾಲೋಚನೆಗೆ ಮಂಡಿಸಿದರು.
ಮಸೂದೆ ಕುರಿತು ಮಾತನಾಡಿದ ಬಿಜೆಪಿಯ ಸಿ.ಟಿ.ರವಿ ಮತ್ತು ಪಿ.ಎಚ್.ಪೂಜಾರ್ ಅವರು ಅಲೆಮಾರಿ ಸಮುದಾಯಗಳಿಗೆ ಶೇ 1ರಷ್ಟು ಪ್ರತ್ಯೇಕ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿದರು. ದೀರ್ಘ ಚರ್ಚೆಯ ನಂತರ ಮಸೂದೆಗೆ ಅಂಗೀಕಾರ ಪಡೆಯಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.