ADVERTISEMENT

ಉಮೇಶ್‌ ಕತ್ತಿ ವಿರುದ್ಧದ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2018, 20:00 IST
Last Updated 30 ನವೆಂಬರ್ 2018, 20:00 IST

ಬೆಂಗಳೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿ ಸಿದಂತೆ ಶಾಸಕ ಉಮೇಶ್‌ ಕತ್ತಿ ವಿರುದ್ಧದ ಅರ್ಜಿಯನ್ನು ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಈ ಕುರಿತಂತೆ ‘ಕನ್ನಡ ಅನುಷ್ಠಾನ ಮಂಡಳಿ’ ಅಧ್ಯಕ್ಷ ಆರ್‌.ಪಿ. ಪ್ರಸಾದ್ ದಾಖಲಿಸಿದ್ದ ಖಾಸಗಿ ದೂರನ್ನು ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ವಿ.ಪಾಟೀಲ್, ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ’ ಎಂದರು. ‘ಉಮೇಶ್‌ ಅವರ ಹೇಳಿಕೆಯಿಂದ ದೇಶದ ಅಖಂಡತೆಗೆ ಧಕ್ಕೆ ತರುವ ಹೇಳಿಕೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗಲಿದೆ’ ಎಂದು ಪ್ರಸಾದ್‌ ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT