ಹೈಕೋರ್ಟ್
ಬೆಂಗಳೂರು: ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರ ಅಮಾನತು ಆದೇಶ ರದ್ದುಪಡಿಸಿರುವ ಕೇಂದ್ರೀಯ ಅಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಬುಧವಾರ ಬೆಳಿಗ್ಗೆ ಹೈಕೋರ್ಟ್ ದಿನದ ಕಲಾಪ ಆರಂಭವಾಗುತ್ತಿದ್ದಂತೆಯೇ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಹಾಜರಾದರು.
‘ಮೇಲ್ಮನವಿಗೆ ಸಂಬಂಧಿಸಿದಂತೆ ಅರ್ಜಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಾಳೆ (ಜುಲೈ 3) ವಿಚಾರಣೆ ನಡೆಸುವುದಾಗಿ ತಿಳಿಸಿತು.
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ದುರ್ಘಟನೆಯ ಸಂದರ್ಭದಲ್ಲಿ ಕರ್ತವ್ಯ ಲೋಪದಡಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ರಾಜ್ಯ ಸರ್ಕಾರ 2024ರ ಜೂನ್ 4ರಂದು ಅಮಾನತುಗೊಳಿಸಿತ್ತು. ಇದನ್ನು ಪ್ರಶ್ನಿಸಿ ವಿಕಾಸ್ ಸಿಎಟಿಗೆ ಅರ್ಜಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.