ಸಿದ್ದರಾಮಯ್ಯ (ಸಂಗ್ರಹ ಚಿತ್ರ)
ಬೆಂಗಳೂರು: ‘ಸಂವಿಧಾನ ಮತ್ತು ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆ ಇಟ್ಟಿರುವ, ಈ ನೆಲದ ಕಾನೂನು ಗೌರವಿಸುವ ಒಬ್ಬ ಪ್ರಜೆಯಾಗಿ, ಸುಳ್ಳು ಪ್ರಕರಣದಲ್ಲಿ ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ರಾಜಕೀಯ ಪ್ರೇರಿತ ನಿರ್ಣಯದ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
‘ಈ ವಿಚಾರವನ್ನು ಆಲಿಸಿದ ಹೈಕೋರ್ಟ್, ಮುಂದಿನ ವಿಚಾರಣೆವರೆಗೆ ವಿಶೇಷ ನ್ಯಾಯಾಲಯಗಳು ವಿಚಾರಣೆ ಮುಂದೂಡಬೇಕು. ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳಬಾರದು ಎಂದು ಮಧ್ಯಂತರ ಆದೇಶ ನೀಡಿದೆ’ ಎಂದಿದ್ದಾರೆ.
‘ನ್ಯಾಯಾಲಯದ ಈ ಆದೇಶವನ್ನು ಸ್ವೀಕರಿಸುತ್ತೇನೆ. ಅಂತಿಮ ಗೆಲುವು ಸತ್ಯದ್ದೇ ಆಗಿರಲಿದೆ ಎಂಬುದು ನನ್ನ ದೃಢ ನಂಬಿಕೆ’ ಎಂದೂ ಮುಖ್ಯಮಂತ್ರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.