ಚಿಕ್ಕಮಗಳೂರು: ರಾಜ್ಯದಲ್ಲಿ 2500 ವೈದ್ಯರ ಹುದ್ದೆಗಳು ಖಾಲಿ ಇದ್ದು, ಕೋವಿಡ್–19 ತಣ್ಣಗಾದ ನಂತರ ನೇಮಕಾತಿ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಇಲ್ಲಿ ಗುರುವಾರ ತಿಳಿಸಿದರು.
‘ವೈದ್ಯರ ಹುದ್ದೆಗಳ ಭರ್ತಿ ನಿಟ್ಟಿನಲ್ಲಿ ಈಗಾಗಲೇ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿದೆ. ಲಸಿಕೆ ಕಂಡುಹಿಡಿಯುವವರೆಗೆ ಕೋವಿಡ್‌ನೊಂದಿಗೆ ಪಯಣಿಸಲೇಬೇಕಾದ ಅನಿವಾರ್ಯ ಇದೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
‘ಮುಂಬೈನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದ ಮಂಡ್ಯ ಜಿಲ್ಲೆಯ ವ್ಯಕ್ತಿಯನ್ನು ಊರಿಗೆ ಅಂಬುಲೆನ್ಸ್‌ನಲ್ಲಿ ತರಲಾಗಿತ್ತು. ಅಂಬುಲೆನ್ಸ್‌ನಲ್ಲಿ ಪತ್ನಿ, ಇಬ್ಬರು ಮಹಿಳೆಯರು, ಪುತ್ರ, ಇಬ್ಬರು ಮೊಮ್ಮಕ್ಕಳು, ಸಂಬಂಧಿಯೊಬ್ಬರು ಬಂದಿದ್ದಾರೆ. ಈ ಪೈಕಿ ಮಕ್ಕಳು, ಮೊಮ್ಮಕ್ಕಳಿಗೆ ಕೊರೊನಾ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯೂ ನಡೆಯುತ್ತಿದೆ’ ಎಂದು ಪ್ರತಿಕ್ರಿಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.