ADVERTISEMENT

ಅತಿಥಿ ಉಪನ್ಯಾಸಕರ ನೇಮಕ: ಜ.10ರವರೆಗೆ ಅರ್ಜಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2023, 21:43 IST
Last Updated 4 ಜನವರಿ 2023, 21:43 IST
   

ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆಗೆ ಕಾಲೇಜು ಶಿಕ್ಷಣ ಇಲಾಖೆ ಚಾಲನೆ ನೀಡಿದ್ದು, ಅರ್ಜಿ ಸಲ್ಲಿಸಲು ಜನವರಿ 10ರವರೆಗೆ ಅವಕಾಶ ನೀಡಿದೆ.

2022–23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಕಾಯಂ ಅಧ್ಯಾಪಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಯುವ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಮೆರಿಟ್‌ ಪಟ್ಟಿಯ ಪ್ರಕಾರ ಸ್ಥಳ ಆಯ್ಕೆಗೆ ಜ. 16ರಿಂದ 25ರವರೆಗೆ ಕೌನ್ಸೆಲಿಂಗ್ ನಡೆಸಲಾಗುವುದು, ಸ್ಥಳ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ಫೆಬ್ರುವರಿ 1ರ ಒಳಗೆ ಕರ್ತವ್ಯಕ್ಕೆ ಹಾಜರಾಗಬೇಕು. ಅರ್ಜಿ ಸಲ್ಲಿಸಲು ಇಲಾಖೆಯ ವೆಬ್‌ಸೈಟ್‌ https://dce.karnataka.gov.in

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT