ADVERTISEMENT

ಶೀಘ್ರದಲ್ಲೇ ಲೋಕಾಯುಕ್ತರ ನೇಮಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 8 ಜೂನ್ 2022, 5:53 IST
Last Updated 8 ಜೂನ್ 2022, 5:53 IST
ಮೈಸೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ‌ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮೈಸೂರು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ‌ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ   

ಮೈಸೂರು: ಲೋಕಾಯುಕ್ತರ ನೇಮಕಾತಿಗೆ ಸಂಬಂಧಿಸಿದ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ‌ಬುಧವಾರ ಮಾತನಾಡಿದ ಅವರು, ಲೋಕಾಯುಕ್ತ ನೇಮಕಕ್ಕೆ ಸಂಬಂಧಿಸಿ ಹೈಕೋರ್ಟ್ ‌ನೀಡಿರುವ ಸೂಚನೆಯಂತೆ ಕ್ರಮ ವಹಿಸಲಾಗಿದೆ ಎಂದರು.

ಕಾಂಗ್ರೆಸ್, ಜೆಡಿಎಸ್‌ಗೆ ಆಫರ್ ಕೊಟ್ಟಿಲ್ಲ: ಸಿಎಂ
ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಬೇಕಾದಷ್ಟು ಮತಗಳು ನಮ್ಮ ಬಳಿ ಇವೆ. ಕಾಂಗ್ರೆಸ್ ಅಥವಾ ಜೆಡಿಎಸ್‌ಗೆ ನಾವು ಯಾವುದೇ ಆಫರ್ ಕೊಟ್ಟಿಲ್ಲ. ಅವರೂ ನಮಗೆ ಆಫರ್ ಕೊಟ್ಟಿಲ್ಲ. ನಮಗೂ ಅವರಿಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಕಾವೇರಿ ನೀರಾವರಿ ಪ್ರಾಧಿಕಾರದ ತೀರ್ಪು ಅಂತಿಮವಾಗಿದೆ.‌ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಪ್ರಾಧಿಕಾರ ರಚನೆ ಆಗಿರುವುದರಿಂದ ಮಧ್ಯಪ್ರವೇಶ ಮಾಡಲಾಗದು. ಏನೇ ನಿರ್ಧಾರವಿದ್ದರೂ ಪ್ರಾಧಿಕಾರವೇ ಮಾಡುತ್ತದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.‌ಸೋಮಶೇಖರ್, ಸಂಸದ ಪ್ರತಾಪ ಸಿಂಹ, ಶಾಸಕರಾದ ಎಸ್.ಎ. ರಾಮದಾಸ್, ಎಲ್. ನಾಗೇಂದ್ರ, ಮೇಯರ್ ಸುನಂದಾ ಪಾಲನೇತ್ರ ಇದ್ದರು.

ಮುಖ್ಯಮಂತ್ರಿ ದಕ್ಷಿಣ ಪದವೀಧರರ ಕ್ಷೇತ್ರದಿಂದ ವಿಧಾನಪರಿಷತ್‌ಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ಇಲ್ಲಿಗೆ ಬಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.