ಬೆಂಗಳೂರು: ರಾಜ್ಯದ ಐದು ವಿಶ್ವವಿದ್ಯಾಲಯಗಳಿಗೆ ಹಂಗಾಮಿ ಕುಲಪತಿಗಳನ್ನು ನೇಮಿಸಿ ರಾಜ್ಯಪಾಲ ವಜುಭಾಯಿ ವಾಲಾ ಆದೇಶ ಹೊರಡಿಸಿದ್ದಾರೆ.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಡಾ.ಎ.ಎಸ್.ಶಿರಾಲ್ ಶೆಟ್ಟಿ, ಗುಲಬರ್ಗಾ ವಿಶ್ವವಿದ್ಯಾಲಯಕ್ಕೆಪ್ರೊ.ಎಸ್.ಪಿ. ಮೆಲ್ಕೇರಿ, ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆಪ್ರೊ.ಎಸ್.ಎಂ.ಹುರಕಡ್ಲಿ, ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯಕ್ಕೆ ಪ್ರೊ.ಎಸ್.ಎಸ್. ಪಾಟೀಲ್ ಹಾಗೂ ಬೆಂಗಳೂರಿನ ಕರ್ನಾಟಕ ಸಂಸ್ಕೃತವಿಶ್ವವಿದ್ಯಾಲಯಕ್ಕೆ ಪ್ರೊ.ವಿ.ಗಿರೀಶ್ ಚಂದ್ರ ಅವರನ್ನು ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.