ಬೆಂಗಳೂರು: ‘ಕಾನೂನು ಪದವಿ ಪೂರೈಸದೇ ವಕೀಲರ ಸಮವಸ್ತ್ರ ಧರಿಸಿ ಕೋರ್ಟ್‌ಗೆ ಹಾಜರಾಗುವ ನಕಲಿ ವಕೀಲರ ಬಗ್ಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ರಾಜ್ಯ ವಕೀಲರ ಪರಿಷತ್ ಎಚ್ಚರಿಸಿದೆ.
ಈ ಸಂಬಂಧ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದಿರುವ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಎಸ್.ಎಸ್.ಮಿಟ್ಟಲಕೋಡ್, ನಕಲಿ ವಕೀಲರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ವಿಚಾರಣಾ ನ್ಯಾಯಾಲಯಗಳ ನ್ಯಾಯಾಧೀಶರಿಗೆ ಸೂಕ್ತ ಮಾಹಿತಿ ನೀಡುವಂತೆ ರಿಜಿಸ್ಟ್ರಾರ್ ಅವರಿಗೆ ಮನವಿ ಮಾಡಿದ್ದಾರೆ.
‘ಸನ್ನದು ಇಲ್ಲದ ಅನುಮಾನಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅಂತಹವರ ಹೆಸರು, ಭಾವಚಿತ್ರ, ನೋಂದಣಿ ಸಂಖ್ಯೆ ಮತ್ತು ಸ್ಥಳದ ಮಾಹಿತಿಯನ್ನು kar_barcouncil@yahoo.comಗೆ ಇ-ಮೇಲ್ ಮಾಡಬಹುದು’ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.