ADVERTISEMENT

30 ತಾಲ್ಲೂಕುಗಳಲ್ಲಿ ಆಡಳಿತ ಸೌಧ ನಿರ್ಮಾಣಕ್ಕೆ ಒಪ್ಪಿಗೆ: ಅಶೋಕ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2022, 4:38 IST
Last Updated 20 ಸೆಪ್ಟೆಂಬರ್ 2022, 4:38 IST
ವಿಧಾನಸೌಧದಲ್ಲಿ ಬುಧವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಮಾತನಾಡುತ್ತಿರುವ ದೃಶ್ಯ –ಪ್ರಜಾವಾಣಿ ಚಿತ್ರ
ವಿಧಾನಸೌಧದಲ್ಲಿ ಬುಧವಾರ ನಡೆದ ವಿಧಾನ ಪರಿಷತ್ ಕಲಾಪದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಮಾತನಾಡುತ್ತಿರುವ ದೃಶ್ಯ –ಪ್ರಜಾವಾಣಿ ಚಿತ್ರ   

ಬೆಂಗಳೂರು: ರಾಜ್ಯದ 30ತಾಲ್ಲೂಕುಗಳಲ್ಲಿ ಹೊಸದಾಗಿ ತಾಲ್ಲೂಕು ಆಡಳಿತ ಸೌಧ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ ಎಂದು ಕಂದಾಯ ಸಚಿವ ಆರ್‌.ಅಶೋಕ ತಿಳಿಸಿದರು.

ವಿಧಾನಸಭೆಯಲ್ಲಿ ಜೆಡಿಎಸ್‌ನ ನಾಗನಗೌಡ ಕಂದಕೂರ ಅವರ ಪ್ರಶ್ನೆಗೆ ಸೋಮವಾರ ಉತ್ತರಿಸಿದ ಅವರು, ‘ತಾಲ್ಲೂಕುಗಳ ಸಂಖ್ಯೆ 177ರಿಂದ 227ಕ್ಕೆ ಏರಿಕೆಯಾಗಿದೆ. ಎಲ್ಲ ತಾಲ್ಲೂಕುಗಳಲ್ಲೂ ಒಂದೇ ವರ್ಷದಲ್ಲಿ ಆಡಳಿತ ಸೌಧ ನಿರ್ಮಾಣ ಕಷ್ಟ’ ಎಂದರು.

‘ಈ ಆರ್ಥಿಕ ವರ್ಷದಲ್ಲಿ 30 ತಾಲ್ಲೂಕುಗಳಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ಅನುಮತಿ ದೊರಕಿದೆ. ಆದ್ಯತೆಯ ಅನುಸಾರ ಮಂಜೂರು ಮಾಡಲಾಗುವುದು’ ಎಂದರು.

ADVERTISEMENT

ಗುರುಮಠಕಲ್‌ ತಾಲ್ಲೂಕಿಗೆ ಹೊಸ ಆಡಳಿತ ಸೌಧ ಮಂಜೂರು ಮಾಡುವಂತೆ ಶಾಸಕರು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.