ADVERTISEMENT

ಹಿಂದೂ ಧರ್ಮ ಅಶ್ಲೀಲವಲ್ಲ, ಕಾಂಗ್ರೆಸ್ ಅಶ್ಲೀಲ: ಆರಗ ಜ್ಞಾನೇಂದ್ರ ಕಿಡಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2022, 6:22 IST
Last Updated 9 ನವೆಂಬರ್ 2022, 6:22 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ತುಮಕೂರು: ‘ಹಿಂದೂ ಧರ್ಮ ಅಶ್ಲೀಲವಲ್ಲ, ಕಾಂಗ್ರೆಸ್ ಅಶ್ಲೀಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ ಟೀಕಿಸಿದರು.

ಜಿಲ್ಲಾ ಆಸ್ಪತ್ರೆಗೆ ಬುಧವಾರ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಶಾಸಕ ಸತೀಶ್ ಜಾರಕಿಹೊಳಿ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

‘ಕಾಂಗ್ರೆಸ್ ವೋಟ್ ಬ್ಯಾಂಕ್ ಮಾಡಿಕೊಳ್ಳಲು ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಿದೆ. ಧರ್ಮವನ್ನು ಒಡೆದು ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ತಾಕತ್ತು ಇದ್ದರೆ ಜಾರಕಿಹೊಳಿ ಅವರನ್ನು ಪಕ್ಷದಿಂದ ಹೊರಗೆ ಹಾಕಲಿ ಎಂದು ಸವಾಲು ಹಾಕಿದರು.

ADVERTISEMENT

ಹಿಂದೂ ಧರ್ಮ ಒಟ್ಟಾಗಿ ಇರಲು ಕಾಂಗ್ರೆಸ್ ಬಿಡುವುದಿಲ್ಲ. ಧರ್ಮಗಳನ್ನು ವಿಂಗಡಿಸುವ ಕೆಲಸವನ್ನು ಮಾಡುತ್ತಿದೆ. ಕಾಂಗ್ರೆಸ್ ಮುಖಂಡರ ಹೇಳಿಕೆ ಗಮನಿಸಿದರೆ ಮಗುವನ್ನು ಚಿವುಟಿ, ತೊಟ್ಟಿಲು ತೂಗುವಂತಿದೆ ಎಂದು ಕುಟುಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.