ADVERTISEMENT

ರಾಕೇಶ್‌ ಟಿಕಾಯತ್‌ ಮೇಲೆ ಹಲ್ಲೆ ಅಮಾನವೀಯ ಘಟನೆ: ಆರಗ

​ಪ್ರಜಾವಾಣಿ ವಾರ್ತೆ
Published 30 ಮೇ 2022, 19:31 IST
Last Updated 30 ಮೇ 2022, 19:31 IST
   

ಬೆಂಗಳೂರು: ರಾಕೇಶ್‌ ಟಿಕಾಯತ್‌ ಮೇಲೆ ಹಲ್ಲೆ ನಡೆಸಿರುವುದನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಖಂಡಿಸಿದ್ದು, ಹಲ್ಲೆ ನಡೆಸಿದವರು ಯಾವುದೇ ಸಂಘಟನೆ, ಪಕ್ಷಕ್ಕೆ ಸೇರಿದವರಾದರೂ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ತಿಳಿಸಿದರು.

‘ಪೊಲೀಸರುಮೂವರನ್ನು ವಶಕ್ಕೆ ಪಡೆದು, ತನಿಖೆ ನಡೆಸು
ತ್ತಿದ್ದಾರೆ. ಇದೊಂದು ಅಮಾನವೀಯ ಘಟನೆ. ಯಾವುದೇ ರಾಜಕೀಯ ಪಕ್ಷ
ಗಳು ಇಂತಹ ಘಟನೆಗಳಿಗೆ ಕುಮ್ಮಕ್ಕು ನೀಡುವುದಿಲ್ಲ’ ಎಂದರು.

‘ಪಠ್ಯಪುಸ್ತಕ ವಿವಾದ ಮರೆ
ಮಾಚಲು ಈ ಪ್ರಕರಣ ಸೃಷ್ಟಿಸಲಾಗಿದೆ’ ಎಂಬ ಡಿ.ಕೆ.ಶಿವಕುಮಾರ್‌ ಅವರ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ‘ಇನ್ನೊಂದು ವರ್ಷದಲ್ಲಿ ವಿಧಾನಸಭೆ ಚುನಾವಣೆ ಬರುತ್ತಿದೆ. ಆದ್ದರಿಂದ ಕಾಂಗ್ರೆಸ್‌ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.