ADVERTISEMENT

ಧ್ವನಿವರ್ಧಕ ಬಳಕೆ: ಸುಪ್ರೀಂ ಆದೇಶ ಕಟ್ಟುನಿಟ್ಟಾಗಿ ಜಾರಿ –ಸಚಿವ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 11 ಮೇ 2022, 8:27 IST
Last Updated 11 ಮೇ 2022, 8:27 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ    

ಬೆಂಗಳೂರು: ಶಬ್ದ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ರಾಜ್ಯದಾದ್ಯಂತ ಯಾವುದೇ ತಾರತಮ್ಯ ಇಲ್ಲದೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, ‘ಸುಪ್ರೀಂ ಕೋರ್ಟ್ ಆದೇಶದಂತೆ ಶಬ್ದ ಮಾಲಿನ್ಯ ನಿಯಂತ್ರಣ ನಿಯಮಗಳ ಅನುಷ್ಠಾನಕ್ಕೆ ಹೊಸ ಸುತ್ತೋಲೆಯನ್ನು ಹೊರಡಿಸಲಾಗಿದೆ. ಮಸೀದಿ, ಚರ್ಚ್, ದೇವಸ್ಥಾನ ಸೇರಿದಂತೆ ಯಾವುದೇ ಸ್ಥಳದಲ್ಲಿ ಧ್ವನಿವರ್ಧಕ ಬಳಕೆಯಲ್ಲಿ ನಿಯಮ ಉಲ್ಲಂಘನೆ ಅದರೂ ಕ್ರಮ ಕೈಗೊಳ್ಳಲಾಗುವುದು’ಎಂದರು.

ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6ಗಂಟೆಯವರೆಗೆ ಧ್ವನಿವರ್ಧಕ ಬಳಕೆಗೆ ಅವಕಾಶವಿಲ್ಲ. ಯಾವ ಪ್ರದೇಶದಲ್ಲಿ ಎಷ್ಟು ಪ್ರಮಾಣದಲ್ಲಿ ಧ್ವನಿವರ್ಧಕ ಬಳಸಬಹುದು ಎಂಬ ಮಿತಿಯನ್ನೂ ಸ್ಪಷ್ಟಪಡಿಸಲಾಗಿದೆ. ಖಾಸಗಿ ಸ್ಥಳಗಳಲ್ಲೂ ಈ ನಿರ್ಬಂಧ ಅನ್ವಯವಾಗುತ್ತದೆ ಎಂದು ಹೇಳಿದರು.

ನಿಯಮ ಉಲ್ಲಂಘಿಸುವ ಮತ್ತು ಅನುಮತಿ ಇಲ್ಲದ ಧ್ವನಿವರ್ಧಕಗಳನ್ನು ತೆರವು ಮಾಡುವ ಕಾರ್ಯಾಚರಣೆ ರಾಜ್ಯದಾದ್ಯಂತ ನಡೆಯಲಿದೆ. ಇದಕ್ಕಾಗಿ ಅಧಿಕಾರಿಗಳ ತಂಡ ರಚಿಸಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.