ADVERTISEMENT

ನವದೆಹಲಿ: ವರಿಷ್ಠರ ಭೇಟಿಯಾದ ಅರವಿಂದ ಬೆಲ್ಲದ

ಪಿಟಿಐ
Published 15 ಜುಲೈ 2025, 15:27 IST
Last Updated 15 ಜುಲೈ 2025, 15:27 IST
   

ನವದೆಹಲಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅವರು ಪಕ್ಷದ ವರಿಷ್ಠರನ್ನು ಭೇಟಿ ಮಾಡಿ ಸಮಾಲೋಚಿಸಿದರು. 

ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಲ್ಲಿ ಬಿ.ವೈ. ವಿಜಯೇಂದ್ರ ಮುಂದುವರಿಕೆಗೆ ಪಕ್ಷದ ಭಿನ್ನರು ಹಾಗೂ ತಟಸ್ಥ ಗುಂಪಿನ ವಿರೋಧ ಇದೆ. 75 ವರ್ಷ ದಾಟಿರುವ ಕೇಂದ್ರ ಸಚಿವ ವಿ.ಸೋಮಣ್ಣ ಅವರನ್ನು ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ನೇಮಿಸುವ ಸಾಧ್ಯತೆ ಕಡಿಮೆ ಎಂಬ ಚರ್ಚೆ ಪಕ್ಷದ ವಲಯದಲ್ಲಿ ನಡೆದಿದೆ. ವಿಜಯೇಂದ್ರ ಅವರನ್ನು ಕೆಳಗಿಳಿಸಿದರೆ ಲಿಂಗಾಯತ ಸಮುದಾಯದ ನಾಯಕರನ್ನು ಪರಿಗಣಿಸಬಹುದು ಎಂಬುದು ಪಕ್ಷದ ಒಂದು ಗುಂಪಿನ ವಾದ. ಹೀಗಾಗಿ, ಅಧ್ಯಕ್ಷ ಸ್ಥಾನಕ್ಕಾಗಿ ಬೆಲ್ಲದ ಲಾಬಿ ನಡೆಸಿದ್ದಾರೆ. 

ಮಂಗಳವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಬೆಲ್ಲದ, ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ವರಿಷ್ಠರ ತೀರ್ಮಾನಕ್ಕೆ ಬದ್ಧ. ವರಿಷ್ಠರನ್ನು ಭೇಟಿ ಮಾಡಿ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದೇನೆ’ ಎಂದರು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.