ದಯಾನಂದ ತಿರಕಣ್ಣವರ, ಅನೂಪ್, ಮಹೇಶ್
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.
ಘಟನೆಯಲ್ಲಿ ಐವರು ಯೋಧರು ಗಾಯಗೊಂಡಿದ್ದು ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಮೃತ ಯೋಧರು.
ಸುದ್ದಿ ತಿಳಿದು ಮೃತ ಯೋಧರ ಸಂಬಂಧಿಕರ, ಮಿತ್ರರ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಮಹಾರಾಷ್ಟ್ರದ ಇನ್ನಿಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸುತ್ತಿದ್ದಾರೆ.
ಯೋಧರು ಸೇನಾ ವಾಹನದಲ್ಲಿ ಸಾಗುತ್ತಿದ್ದರು. ವಾಹನವು ಕಿರಿದಾದ ರಸ್ತೆಯಿಂದ ಜಾರಿ ಅಂದಾಜು 150 ಅಡಿ ಆಳದ ಕಮರಿಗೆ ಉರುಳಿತು. ವಾಹನವು ರಸ್ತೆಯಿಂದ ಜಾರಿದ್ದು ಏಕೆ ಎಂಬ ಬಗ್ಗೆ ತನಿಖೆ ನಡೆದಿದೆ.
ನೀಲಂ ಪ್ರಧಾನ ಕಚೇರಿಯಿಂದ ಬಲ್ನೋಯಿ ಘೋರಾ ಪೋಸ್ಟ್‌ಗೆ ಈ ವಾಹನ ಬರುತ್ತಿತ್ತು, ಘೋರಾ ಪೋಸ್ಟ್ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬೆಳಗಾವಿ ವರದಿ
ತಾಲ್ಲೂಕಿನ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45) ಕೂಡ ಮೃತಪಟ್ಟಿದ್ದಾರೆ.
ಯೋಧರು ಸೇನಾ ವಾಹನದಲ್ಲಿ ಸಾಗುತ್ತಿದ್ದ ವೇಳೆ ಕಿರಿದಾದ ರಸ್ತೆಯಲ್ಲಿ 150 ಅಡಿ ಆಳಕ್ಕೆ ವಾಹನ ಉರುಳಿ ಬಿದ್ದು ಅಪಘಾತ ಸಂಭವಿಸಿದೆ ಎಂದು ಮೂಲಗಳು ಖಚಿತಪಡಿಸಿವೆ.
ಸುಬೇದಾರ್ ದಯಾನಂದ ಅವರು, ಕೆಲವರು ವರ್ಷಗಳಿಂದ ಸೇನೆಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಗುರುವಾರ ಮಧ್ಯಾಹ್ನದ ವೇಳೆಗೆ ಪಾರ್ಥಿವ ಶರೀರ ಗ್ರಾಮಕ್ಕೆ ಬರುವ ನಿರೀಕ್ಷೆ ಇದೆ ಎಂದು ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.