ADVERTISEMENT

ಆರೋಗ್ಯ ಸೇತು ಆ್ಯಪ್ ಕಡ್ಡಾಯ: ಸ್ಪಷ್ಟನೆ ಕೇಳಿದ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 17 ಜುಲೈ 2020, 19:42 IST
Last Updated 17 ಜುಲೈ 2020, 19:42 IST
ಆರೋಗ್ಯ ಸೇತು
ಆರೋಗ್ಯ ಸೇತು   

ಬೆಂಗಳೂರು: ಆರೋಗ್ಯ ಸೇತು ಆ್ಯಪ್‌ ಬಳಕೆಯನ್ನು ಕೆಲವು ಸೇವೆಗಳಲ್ಲಿ ಕಡ್ಡಾಯ ಮಾಡಿರುವ ಕುರಿತು ಸ್ಪಷ್ಟನೆ ನೀಡುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಆರೋಗ್ಯ ಸೇತು ಆ್ಯಪ್‌ ಕಡ್ಡಾಯದಿಂದ ಉಂಟಾಗಲಿರುವ ಸಮಸ್ಯೆಗಳ ಬಗ್ಗೆ ಅನಿವಾರ್ ಎ.ಅರವಿಂದ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ಹಾಗೂ ನ್ಯಾಯಮೂರ್ತಿ ಎನ್‌.ನಾಗಪ್ರಸನ್ನ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

‘ಮೆಟ್ರೊ ರೈಲು ಸೇವೆ ಆರಂಭವಾದ ನಂತರ ಪ್ರಯಾಣಿಸಲು ಆರೋಗ್ಯ ಸೇತು ಆ್ಯಪ್ ಕಡ್ಡಾಯ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್‌ಸಿಎಲ್‌) ಹೇಳಿದೆ.ಸ್ಮಾರ್ಟ್‌ಫೋನ್ ಇರುವವರು ಮತ್ತು ಇಲ್ಲದವರ ನಡುವೆ ತಾರತಮ್ಯವನ್ನು ಇದು ಹುಟ್ಟುಹಾಕಲಿದೆ. ನಾಗರಿಕರ ಖಾಸಗಿತನದ ಹಕ್ಕನ್ನೂ ಇದು ಕಸಿದುಕೊಳ್ಳಲಿದೆ’ ಎಂಬುದು ಅರ್ಜಿದಾರರ ವಾದ.

ADVERTISEMENT

‘ಆಕ್ಷೇಪಣೆ ಸಲ್ಲಿಸಲು ಸರ್ಕಾರಗಳಿಗೆ ಅವಕಾಶ ನೀಡಲಾಗಿದೆ. ಮುಂದಿನ ವಿಚಾರಣೆ ವೇಳೆಗೆ ಬಿಎಂಆರ್‌ಸಿಎಲ್‌ ಕೂಡ ಈ ಬಗ್ಗೆ ವಿವರಣೆ ನೀಡಬೇಕು’ ಎಂದು ಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.